ಮುಂಬರುವ ಪಂಜಾಬ್ ಚುನಾವಣೆಯಲ್ಲಿ ಬಿಜೆಪಿಗೆ ಒಂದೆರಡು ಸ್ಥಾನಗಳು ಮಾತ್ರ ಸಿಗಲಿವೆ; ಸಿಎಂ ಭಗವಂತ್ ಮಾನ್ ಭವಿಷ್ಯ | CM Bhagwant Mann

ಪಂಜಾಬ್ ಸಿಎಂ ಭಗವಂತ್ ಮಾನ್
ಪಂಜಾಬ್ ಸಿಎಂ ಭಗವಂತ್ ಮಾನ್
Published on
ನವದೆಹಲಿ: ಮುಂದಿನ ವರ್ಷ ನಡೆಯಲಿರುವ ಪಂಜಾಬ್ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್ ಒಟ್ಟಾಗಿ ಹತ್ತು ಸ್ಥಾನಗಳಿಗಿಂತ ಹೆಚ್ಚು ಗೆಲ್ಲುವುದಿಲ್ಲ, ಬಿಜೆಪಿ ಒಂದೆರಡು ಸ್ಥಾನಗಳಲ್ಲಿ ಮಾತ್ರ ಗೆಲುವು ಸಾಧಿಸಲಿದೆ ಎಂದು ಮುಖ್ಯಮಂತ್ರಿ ಭಗವಂತ್ ಮಾನ್(CM Bhagwant Mann) ಭವಿಷ್ಯ ನುಡಿದಿದ್ದಾರೆ.
ಎನ್​ಡಿಟಿವಿ ಸಂಪಾದಕರ ಜೊತೆ ನಡೆದ ಸಂದರ್ಶನದಲ್ಲಿ ಮಾತನಾಡಿರುವ ಅವರು, ಪಠಾಣ್‌ಕೋಟ್ ಪ್ರದೇಶದಲ್ಲಿ ಬಿಜೆಪಿ ಒಂದು ಅಥವಾ ಎರಡು ಸ್ಥಾನಗಳನ್ನು ಗೆಲ್ಲಬಹುದು, ಆದರೆ ಕಾಂಗ್ರೆಸ್‌ನ ಪರಿಸ್ಥಿತಿ ಒಂದಂಕಿಗೆ ಕುಸಿಯುತ್ತದೆ. ಓಟದಲ್ಲಿ ಕಾಂಗ್ರೆಸ್ ಬಿಜೆಪಿಗಿಂತ ಸ್ವಲ್ಪ ಉತ್ತಮವಾಗಿರಬಹುದು ಎಂದು ಹೇಳಿದ್ದಾರೆ.
ಬಂಗಾಳದಲ್ಲಿ ಬಿಜೆಪಿಯ ಗೆಲುವಿನ ಬಗ್ಗೆ ಕೇಳಿದಾಗ, ಇಲ್ಲಿಯೂ ಅದೇ ಸಂಭವಿಸುತ್ತದೆ ಎಂದು ನಾವು ಯಾಕೆ ಭಾವಿಸಬೇಕು? ನಾನು ಜನರ ನಡುವೆ ವಾಸಿಸುತ್ತೇನೆ. ನಾನು ಹೇಳುವುದನ್ನು ಬರೆದಿಟ್ಟುಕೊಳ್ಳಿ ಮತ್ತು ಅದನ್ನು ಸಂರಕ್ಷಿಸಿಟ್ಟುಕೊಳ್ಳಿ ಎಂದು ಪ್ರತಿಪಾದಿಸಿದ್ದಾರೆ.
2022ರಲ್ಲಿ ಪಂಜಾಬ್‌ನಲ್ಲಿ ಅರವಿಂದ್ ಕೇಜ್ರಿವಾಲ್ ನೇತೃತ್ವದ ಆಮ್ ಆದ್ಮಿ ಪಕ್ಷವು ಭಾರಿ ಜಯ ಸಾಧಿಸಿತು. 117 ವಿಧಾನಸಭಾ ಸ್ಥಾನಗಳಲ್ಲಿ ಸ್ಪರ್ಧಿಸಿ 92 ಸ್ಥಾನಗಳನ್ನು ಗೆದ್ದಿತು. 2017 ರಲ್ಲಿ 77 ಸ್ಥಾನಗಳನ್ನು ಗೆದ್ದಿದ್ದ ಕಾಂಗ್ರೆಸ್ ಪಕ್ಷವು ಈ ಚುನಾವಣೆಯಲ್ಲಿ ಕೇವಲ 18 ಸ್ಥಾನಗಳಿಗೆ ಸೀಮಿತವಾಗಿತ್ತು. ಬಿಜೆಪಿ ಕೇವಲ 2 ಸ್ಥಾನಗಳನ್ನು ಮತ್ತು ಶಿರೋಮಣಿ ಅಕಾಲಿ ದಳ 3 ಸ್ಥಾನಗಳಲ್ಲಿ ಗೆಲುವು ಪಡೆದಿತ್ತು (ಏಜೆನ್ಸೀಸ್).
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net