ಪಶ್ಚಿಮ ಏಷ್ಯಾದಲ್ಲಿ ಯುದ್ಧದ ಪರಿಸ್ಥಿತಿ ಭುಗಿಲೆದ್ದಾಗ ಪ್ರಧಾನಿ ನರೇಂದ್ರ ಮೋದಿ, ದೇಶದ ಜನರಿಗೆ ಎಲ್ಲವೂ ನಿಯಂತ್ರಣದಲ್ಲಿದೆ ಎಂಬ ನಿದ್ರಾಜನಕ ಮಾತ್ರೆ ನೀಡುವಲ್ಲಿ ನಿರತರಾಗಿದ್ದರು, ಆದರೆ ಅದೇ ಸಮಯದಲ್ಲಿ ಜಗತ್ತಿನ ಪ್ರಮುಖ ದೇಶಗಳು ತಮ್ಮ ನಾಗರಿಕರ ಬೆನ್ನಿಗೆ ನಿಂತಿದ್ದವು ಎಂದು ಖರ್ಗೆ ತಿಳಿಸಿದ್ದಾರೆ. ಇದಕ್ಕೆ ಉದಾಹರಣೆಗಳನ್ನು ನೀಡಿರುವ ಅವರು, ಇಟಲಿ ದೇಶವು ಇಂಧನದ ಮೇಲಿನ ಅಬಕಾರಿ ಸುಂಕವನ್ನು ಕಡಿತಗೊಳಿಸಿ ಜನರಿಗೆ ನೆರವಾಗಿದ್ದರೆ, ಆಸ್ಟ್ರೇಲಿಯಾ ದೇಶವು ಅಬಕಾರಿ ಸುಂಕವನ್ನು ಗಣನೀಯವಾಗಿ ಇಳಿಸಿ ಅಲ್ಲಿನ ಪೆಟ್ರೋಲ್ ಬೆಲೆಯನ್ನು ಪ್ರತಿ ಲೀಟರ್ಗೆ ಸುಮಾರು ಹದಿನೇಳು ರೂಪಾಯಿಗಳಷ್ಟು ಕಡಿತಗೊಳಿಸಿದೆ.