ರೈತರಿಗೆ ಬಂಪರ್ ಕೊಡುಗೆ; 2 ಲಕ್ಷ ರೂಪಾಯಿವರೆಗಿನ ಕೃಷಿ ಸಾಲ ಮನ್ನಾ ಮಾಡಿದ ರಾಜ್ಯ ಬಿಜೆಪಿ ಸರ್ಕಾರ | farm loans

ಸಿಎಂ ದೇವೇಂದ್ರ ಫಡ್ನವೀಸ್
ಸಿಎಂ ದೇವೇಂದ್ರ ಫಡ್ನವೀಸ್
Published on
ಮುಂಬೈ: ಮಹಾರಾಷ್ಟ್ರದ ಬಿಜೆಪಿ ನೇತೃತ್ವದ ಮಹಾಯುತಿ ಸರ್ಕಾರವೂ ರೈತರಿಗೆ ಭರ್ಜರಿ ಗಿಫ್ಟ್ ನೀಡಿದ್ದು, 2 ಲಕ್ಷ ರೂ.ವರೆಗಿನ ಕೃಷಿ ಸಾಲ(farm loans) ಮನ್ನಾ ಮಾಡಲು ಸಚಿವ ಸಂಪುಟದಲ್ಲಿ ಅನುಮೋದನೆ ನೀಡಿದೆ. ಆ ರಾಜ್ಯದ ಸುಮಾರು 56 ಲಕ್ಷ ಇದರ ಪ್ರಯೋಜನ ಪಡೆಯಲಿದ್ದಾರೆ ಎಂದು ಮಂಗಳವಾರ(ಜೂ. 02) ವರದಿಯಾಗಿದೆ.
ಮುಂಗಾರಿಗೂ ಮುನ್ನ ಇಂದು ಸಿಎಂ ದೇವೇಂದ್ರ ಫಡ್ನವೀಸ್ ನೇತೃತ್ವದಲ್ಲಿ ನಡೆದ ಸಂಪುಟ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ. ಸುಮಾರು 56 ಲಕ್ಷ ರೈತರಿಗೆ ಪ್ರಯೋಜನವಾಗಲಿದೆ ಎನ್ನಲಾಗಿದೆ. 2024ರ ವಿಧಾನಸಭಾ ಚುನಾವಣೆಗೆ ಮುನ್ನ ಬಿಜೆಪಿ ನೇತೃತ್ವದ ಮಹಾಯುತಿ ಮೈತ್ರಿಕೂಟ ಕೃಷಿ ಸಾಲ ಮನ್ನಾ ಮಾಡುವುದಾಗಿ ಭರವಸೆ ನೀಡಿತ್ತು.
ಪ್ರಸ್ತುತ ರಾಜ್ಯದಲ್ಲಿ ವಿಧಾನ ಪರಿಷತ್ ಚುನಾವಣೆಯ ಕಾರಣ ಮಾದರಿ ನೀತಿ ಸಂಹಿತೆ ಜಾರಿಯಲ್ಲಿರುವುದರಿಂದ ಚುನಾವಣೆ ಬಳಿಕ ರಾಜ್ಯ ಸರ್ಕಾರ ಅಧಿಕೃತ ಘೋಷಣೆ ಮಾಡಲಿದೆ ಎನ್ನಲಾಗಿದೆ.
ಇನ್ನೂ ಈ ಸಾಲಮನ್ನಾ ಪ್ರಕ್ರಿಯೆಯೂ 65 ಲಕ್ಷಕ್ಕೂ ಹೆಚ್ಚು ಖಾತೆಗಳನ್ನು ಹೊಂದಿರುವ, ಸುಮಾರು 36,585 ಕೋಟಿ ರೂ.ಗಳ ಸಾಲ ಮನ್ನಾ ಆಗುವ ನಿರೀಕ್ಷೆಯಿದೆ ಎಂದು ವರದಿಗಳು ಉಲ್ಲೇಖಿಸಿವೆ. ಅದೇ ಸಂಪುಟ ಸಭೆಯಲ್ಲೂ ಬೆಳೆ ಸಾಲವನ್ನು ನಿಯಮಿತವಾಗಿ ಮರುಪಾವತಿಸುವ ರೈತರಿಗೆ 50,000 ರೂ.ಗಳವರೆಗೆ ಪ್ರೋತ್ಸಾಹ ಧನ ನೀಡಲು ನಿರ್ಧರಿಸಲಾಗಿದೆ (ಏಜೆನ್ಸೀಸ್).
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net