ರಾಮಲಿಂಗಾ ರೆಡ್ಡಿ ಅವರ ನಿರ್ಧಾರದ ಕುರಿತು ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ಪ್ರತಿಕ್ರಿಯೆ ನೀಡಿದ್ದು, ರಾಮಲಿಂಗಾ ರೆಡ್ಡಿ ಅವರು ಕಾಂಗ್ರೆಸ್ ಪಕ್ಷದ ಅತ್ಯಂತ ಹಿರಿಯ ನಾಯಕರು, ಕಾಂಗ್ರೆಸ್‌ಗೆ ತೊಂದರೆ ಕೊಡುವಂತಹ ಕೆಲಸವನ್ನು ಎಂದಿಗೂ ಮಾಡುವುದಿಲ್ಲ, ರಾಜಕಾರಣದಲ್ಲಿ ಕೆಲವು ಸಂದರ್ಭಗಳಲ್ಲಿ ಇಂತಹ ಬೆಳವಣಿಗೆಗಳು ಸಹಜವಾಗಿ ನಡೆಯುತ್ತಿರುತ್ತವೆ. ನಾವು ಅವರ ಜೊತೆ ವೈಯಕ್ತಿಕವಾಗಿ ಚರ್ಚೆ ನಡೆಸಿ ಎಲ್ಲವನ್ನೂ ಸರಿಪಡಿಸುತ್ತೇವೆ ಎಂದು ಹೇಳಿದ್ದಾರೆ.