ಕಾಕ್ರೋಚ್ ಜನತಾ ಪಾರ್ಟಿ ಜಂತರ್-ಮಂತರ್ನಲ್ಲಿ ಹಮ್ಮಿಕೊಂಡಿರುವ ಪ್ರತಿಭಟನೆಗೆ ದೆಹಲಿ ಪೊಲೀಸರಿಂದ ಯಾವುದೇ ಅನುಮತಿ ಪಡೆದಿಲ್ಲ ಎಂಬ ಮಾಹಿತಿ ಲಭ್ಯವಾಗಿದೆ. ಈ ಕುರಿತು ಮಾಹಿತಿ ನೀಡಿರುವ ಪೊಲೀಸರು, ಪ್ರತಿಭಟನೆ ಚೌಕಟ್ಟನ್ನು ಮೀರಿ ನಡೆದರೆ ಏನು ಮಾಡಬೇಕೆಂದು ನಮಗೆ ತಿಳಿದಿದೆ, ಸಾವಿರಾರು ಜನ ಸೇರಲಿರುವ ಮಾಹಿತಿ ಇರುವ ಕಾರಣ 1,000 ಕ್ಕೂ ಅಧಿಕ ಪೊಲೀಸರನ್ನು ನಿಯೋಜನೆ ಮಾಡಲಾಗಿದೆ ಎಂದು ಹೇಳಿದ್ದಾರೆ, (ಏಜನ್ಸೀಸ್).