ಕಾಕ್ರೋಚ್​ ಪಾರ್ಟಿಯಿಂದ 'ಚಲೋ ಸಂಸತ್​' ರ‍್ಯಾಲಿ: ಟಿಕೆಟ್ ಇಲ್ಲದೇ ನುಗ್ಗಿದ ಪ್ರತಿಭಟನಾಕಾರರು; 5 ನಿಲ್ದಾಣಗಳಲ್ಲಿ ಮೆಟ್ರೋ ಸೇವೆ ಸ್ಥಗಿತಗೊಳಿಸಿ ಅದೇಶ! Delhi Metro Closed

ದೆಹಲಿಯ 5 ಪ್ರಮುಖ ಮೆಟ್ರೋ ನಿಲ್ದಾಣಗಳಲ್ಲಿ ಸೇವೆ ಸ್ಥಗಿತ
ದೆಹಲಿಯ 5 ಪ್ರಮುಖ ಮೆಟ್ರೋ ನಿಲ್ದಾಣಗಳಲ್ಲಿ ಸೇವೆ ಸ್ಥಗಿತ
Published on

ಪ್ರಮುಖ ಮುಖ್ಯಾಂಶಗಳು

  • ದೇಶದ ಪರೀಕ್ಷಾ ಅಕ್ರಮ ಖಂಡಿಸಿ ದೆಹಲಿಯಲ್ಲಿ ಕಾಕ್ರೋಜ್​ ಜನತಾ ಪಾರ್ಟಿ ಹಮ್ಮಿಕೊಂಡಿದ್ದ ‘ಚಲೋ ಸಂಸತ್’ ರ‍್ಯಾಲಿ
  • ಟಿಕೆಟ್ ಇಲ್ಲದೆ ಮೆಟ್ರೋ ನಿಲ್ದಾಣಕ್ಕೆ ನುಗ್ಗಿದ ಪ್ರತಿಭಟನಾಕಾರರು
  • ರಾಜೀವ್ ಚೌಕ್ ಸೇರಿದಂತೆ 5 ಪ್ರಮುಖ ಮೆಟ್ರೋ ನಿಲ್ದಾಣಗಳಲ್ಲಿ ಸೇವೆ ಸ್ಥಗಿತ
ನವದೆಹಲಿ: ನೀಟ್​ ಸೇರಿದಂತೆ ದೇಶದಲ್ಲಿ ನಡೆಯುತ್ತಿರಯವ ಪರೀಕ್ಷಾ ಅಕ್ರಮವನ್ನು ವಿರೋಧಿಸಿ ಇಂದು (ಜು.20) ಕಾಕ್ರೋಚ್​ ಜನತಾ ಪಾರ್ಟಿ ನೇತೃತ್ವದಲ್ಲಿ ಚಲೋ ಸಂಸತ್​ ಎಂಬ ಪ್ರತಿಭಟನಾ ರ‍್ಯಾಲಿ ನಡೆಯುತ್ತಿದೆ.
ಈ ರ‍್ಯಾಲಿಗೆ ದೇಶದ ಮೂಲೆ-ಮೂಲೆಯಿಂದ ಹಾಗೂ ಮುಖ್ಯವಾಗಿ ದೆಹಲಿಯಿಂದ ಲಕ್ಷಾಂತರ ಜನ ಯುವಕ/ಯುವತಿಯರು ಆಗಮಿಸುತ್ತಿದ್ದಾರೆ. ಆದರೆ ಈ ಜನರನ್ನು ಸಂಭಾಳಿಸಲು ಕಷ್ಟವಾಗುತ್ತಿರುವ ಹಿನ್ನಲೆ ದೆಹಲಿಯಲ್ಲಿ 5 ಮೆಟ್ರೋ ನಿಲ್ದಾಣಗಳಲ್ಲಿ ಸಾರಿಗೆ ಸೇವೆಯನ್ನು ರದ್ದು (Delhi Metro Closed) ಪಡಿಸಲಾಗಿದೆ ಎಂದು ಹೇಳಲಾಗುತ್ತಿದೆ.
ಈ ಪ್ರತಿಭಟಬಾ ರ‍್ಯಾಲಿಯು ಜಂತರ್​-ಮಂತರ್​ನಿಂದ ಸಂಸತ್​​ ಭವನದವರೆಗೆ ನಡೆಯಲಿದ್ದು, ಈ ಮಾರ್ಗದಲ್ಲಿರುವ ಮೆಟ್ರೋ ನಿಲ್ದಾಣಗಳಾದ ರಾಜೀವ್ ಚೌಕ್, ಜನಪಥ್, ಪಟೇಲ್ ಚೌಕ್, ಸೆಂಟ್ರಲ್ ಸೆಕ್ರೆಟರಿಯೇಟ್ ಮತ್ತು ಸೇವಾ ತೀರ್ಥ ಮೆಟ್ರೋ ನಿಲ್ದಾಣಗಳನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಜನರನ್ನು ಕಂಟ್ರೋಲ್​ ಮಾಡಲು ಆಗುತ್ತಿಲ್ಲ!
ಈ ಬಗ್ಗೆ ಮಾಹಿತಿ ಹಂಚಿಕೊಂಡಿರುವ ಮೆಟ್ರೋ ಅಧಿಕಾರಿಗಳು, ಇಂದು ಬೆಳಿಗ್ಗೆ ಎಂದಿನಂತೆ ಮೆಟ್ರೋ ಸೇವೆ ನೀಡಲಾಗುತ್ತಿತ್ತು. ಆದರೆ ಸಮಯ ಕಳೆದಂತೆ ಜನರ ಸಂಖ್ಯೆ ಹೆಚ್ಚುತ್ತಾ ಹೋಗುತ್ತಿದ್ದು, ಜನರು ಟಿಕೆಟ್​ ಪಡೆಯದೇ, ಸುರಕ್ಷತಾ ತಪಾಸಣೆಗೆ ಒಳಗಾಗದೆ, ನುಗ್ಗುತ್ತಿದ್ದಾರೆ.
ಇದರಿಂದ ಮೆಟ್ರೋ ಸಿಬ್ಬಂದಿಗಳಿಗೆ ಹಾಗೂ ಮೆಟ್ರೋ ನಿಲ್ದಾಣಕ್ಕೆ ಸಾಕಷ್ಟು ಸಮಸ್ಯೆ ಎದುರಾಗುತ್ತಿದ್ದು, ಜನರನ್ನು ಕಂಟ್ರೋಲ್​ ಮಾಡಲು ಸಾಧ್ಯವಾಗುತ್ತಿಲ್ಲ. ಹೀಗಾಗಿ ರ‍್ಯಾಲಿ ನಡೆಯುವ ಮಧ್ಯದಲ್ಲಿರುವ 5 ನಿಲ್ದಾಣಗಳಲ್ಲಿ ಮೆಟ್ರೋ ಸೇವೆಯನ್ನು ತಾತ್ಕಾಲಿಕವಾಗಿ ಸ್ಥಗಿತ ಗೊಳಿಸಲಾಗಿದೆ ಎಂದು ತಿಳಿಸಿದ್ದಾರೆ.

ಜೆ.ಪಿ. ನಡ್ಡಾ ಜೊತೆ ಮಾತುಕತೆ!

ಇಂದಿನಿಂದ ರಾಷ್ಟ್ರ ರಾಜಧಾನಿಯಲ್ಲಿ ಮಳೆಗಾಲದ ಸಂಸತ್​ ಅಧಿವೇಶನ ಆರಂಭವಾಗುತ್ತಿದ್ದು, ಇದೇ ಸಂದರ್ಭದಲ್ಲಿ ಕಾಕ್ರೋಚ್​ ಜನತಾ ಪಾರ್ಟಿ ಕಾರ್ಯಕರ್ತರು ಸಂಸತ್​ಗೆ ಮುತ್ತಿಗೆ ಹಾಕಲು ಮುಂದಾಗಿದ್ದರೆಂದು ತಿಳಿದು ಬಂದಿದೆ.
ಈಗ ಸರ್ಕಾರದ ವತಿಯಿಂದ ಕೇಂದ್ರ ಸಚಿವ ಜೆ.ಪಿ. ನಡ್ಡಾ ಮಾತುಕತೆಗೆ ಮುಂದಾಗಿದ್ದಾರೆಂದು ಮಾಹಿತಿ ಲಭ್ಯವಾಗಿದೆ. ಈ ಕುರಿತು ಕಾಕ್ರೋಚ್​ ಜನತಾ ಪಾರ್ಟಿ ವಕ್ತಾರ, ಸೌರವ್​ ದಾಸ್​​, ಎಕ್ಸ್​​ ಪೋಸ್ಟ್​ವೊಂದರಲ್ಲಿ, ಸೋಮವಾರ ಕಾಕ್ರೋಚ್​ ಜನತಾ ಪಾರ್ಟಿಯ ನಾಯಕರು ಕೇಂದ್ರ ಸಚಿವ ಜೆ.ಪಿ. ನಡ್ಡಾ ಅವರನ್ನು ಬೇಟಿಯಾಗಲು ಹೋಗುತ್ತಿದ್ದಾರೆ. ಸರ್ಕಾರ ನಮ್ಮನ್ನು ಸಂಪರ್ಕಿಸಿದೆ ಹೀಗಾಗಿ ಆಶುತೋಷ್​ ರಾಂಕಾ ನೇತೃತ್ವದಲ್ಲಿ ನಾವು ನಮ್ಮ ಬೇಡಿಕೆಯನ್ನು ಸಚಿವರಿಗೆ ಮನವರಿಕೆ ಮಾಡಿಕೊಡಲಿದ್ದು, ನಮಗೆ ಈ ಬಾರಿ ಜಯ ಸಿಗಲಿದೆ ಎಂದು ಬರೆದುಕೊಂಡಿದ್ದಾರೆ, (ಏಜನ್ಸೀಸ್​).
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net