ತಮಿಳುನಾಡು ಕದನಕ್ಕೆ ಒಗ್ಗಟ್ಟಿನ ಮಂತ್ರ...ಶೀಘ್ರದಲ್ಲೇ ಡಿಎಂಕೆ-ಕಾಂಗ್ರೆಸ್ ಸೀಟು ಹಂಚಿಕೆ ಫೈನಲ್ | DMK-Congress Alliance

DMK-Congress Alliance | ರಾಹುಲ್​ ಗಾಂಧಿ ಮತ್ತು ಎಂ ಕೆ ಸ್ಟಾಲಿನ್​
DMK-Congress Alliance | ರಾಹುಲ್​ ಗಾಂಧಿ ಮತ್ತು ಎಂ ಕೆ ಸ್ಟಾಲಿನ್​
Published on
ಚೆನ್ನೈ: ಮಿತ್ರಪಕ್ಷ ಡಿಎಂಕೆ ಜೊತೆಗಿನ ಭಿನ್ನಾಭಿಪ್ರಾಯದ ವರದಿಗಳನ್ನು ನಿರಾಕರಿಸಿರುವ ಕಾಂಗ್ರೆಸ್, ಮುಂಬರುವ ವಿಧಾನಸಭಾ ಚುನಾವಣೆಗೆ ಎರಡೂ ಕಡೆಯವರು ಶೀಘ್ರದಲ್ಲೇ ಸೀಟು ಹಂಚಿಕೆ ಮಾತುಕತೆ ಪ್ರಾರಂಭಿಸಲಿದ್ದಾರೆ ಎಂದು ಹೇಳಿದೆ.
ಈ ವಿಷಯವಾಗಿ ಮಾಧ್ಯಮಗಳೊಂದಿಗೆ ಮಾತನಾಡಿರುವ ತಮಿಳುನಾಡು ಕಾಂಗ್ರೆಸ್ ಅಧ್ಯಕ್ಷ ಕೆ. ಸೆಲ್ವಪೆರುಂಥಗೈ, ನಾವು ನಮ್ಮ ಮಿತ್ರಪಕ್ಷದ ಮೇಲೆ ಒತ್ತಡ ಹೇರುತ್ತಿಲ್ಲ. ನಮಗೆ ಬೇಕಾದುದನ್ನು ಪಡೆಯುತ್ತೇವೆ ಮತ್ತು ಅದನ್ನು ಡಿಎಂಕೆ ನೀಡುತ್ತದೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಇದಕ್ಕೆ ಪ್ರತಿಕ್ರಿಯೆ ನೀಡಿದ ಡಿಎಂಕೆ ಉಪ ಪ್ರಧಾನ ಕಾರ್ಯದರ್ಶಿ ಕನಿಮೋಳಿ, ಎರಡೂ ಪಕ್ಷಗಳು ಅನೌಪಚಾರಿಕ ಮಾತುಕತೆಗಳನ್ನು ಪ್ರಾರಂಭಿಸಿವೆ, ಕಳೆದ ವಾರ ದೆಹಲಿಯಲ್ಲಿ ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿಯನ್ನು ಭೇಟಿಯಾದ ಬಳಿಕ ಈ ಹೇಳಿಕೆ ಹೊರಬಿದ್ದಿದೆ. ಸಿಎಂ ಎಂ.ಕೆ. ಸ್ಟಾಲಿನ್ ಸೀಟು ಹಂಚಿಕೆ ಕುರಿತು ಘೋಷಣೆ ಮಾಡುವ ಸಾಧ್ಯತೆಯಿದೆ ಎಂದಿದ್ದಾರೆ.ಹೆಚ್ಚಿನ ಸ್ಥಾನಗಳಿಗೆ ಬೇಡಿಕೆ ಇಟ್ಟ ಬಳಿಕ ಕಾಂಗ್ರೆಸ್ ಮತ್ತು ಡಿಎಂಕೆ ನಾಯಕರ ನಡುವೆ ಬಿರುಕು ಮೂಡಿದೆ ಎಂಬ ವರದಿಗಳ ಮಧ್ಯೆ ಎರಡು ಪಕ್ಷಗಳ ನಾಯಕರಿಂದ ಈ ಸ್ಪಷ್ಟೀಕರಣ ಬಂದಿದೆ.
2021 ರಲ್ಲಿ ನಡೆದ ಚುನಾವಣೆಯಲ್ಲಿ ರಾಜ್ಯದ 234 ವಿಧಾನಸಭಾ ಕ್ಷೇತ್ರಗಳಲ್ಲಿ ಕಾಂಗ್ರೆಸ್‌ಗೆ 25 ಸ್ಥಾನಗಳನ್ನು ನೀಡಲಾಗಿತ್ತು. ಈ ಪೈಕಿ ಪಕ್ಷವು 18 ಸ್ಥಾನಗಳನ್ನು ಗೆದ್ದಿತ್ತು. ಮತ್ತೊಂದೆಡೆ, ಡಿಎಂಕೆ 188 ಸ್ಥಾನಗಳಲ್ಲಿ ಸ್ಪರ್ಧಿಸಿ 133 ಸ್ಥಾನಗಳನ್ನು ಗೆದ್ದಿತ್ತು. ಈ ವರ್ಷದ ಮಧ್ಯದಲ್ಲಿ ತಮಿಳುನಾಡು, ಪಶ್ಚಿಮ ಬಂಗಾಳ, ಕೇರಳ, ಅಸ್ಸಾಂ ಮತ್ತು ಪುದುಚೇರಿಯಲ್ಲಿ ನಡೆಯುವ ಚುನಾವಣೆಗಳೊಂದಿಗೆ ನಡೆಯುವ ಸಾಧ್ಯತೆಯಿದೆ(ಏಜೆನ್ಸೀಸ್​​).
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net