ಇಂದು ನವದೆಹಲಿಯ ಕಾಂಗ್ರೆಸ್ ಪ್ರಧಾನ ಕಚೇರಿ ಇಂದಿರಾ ಭವನದಲ್ಲಿ ಎಸ್ಐಆರ್ ನಡೆಯುತ್ತಿರುವ 12 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ (ಯುಟಿ) ಪ್ರಮುಖ ಪದಾಧಿಕಾರಿಗಳೊಂದಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನೇತೃತ್ವದಲ್ಲಿ ಸಭೆ ನಡೆಸಿದ ಕಾಂಗ್ರೆಸ್, ಮತಗಳ್ಳತನದ ಆರೋಪವನ್ನು ಮುಂದುವರೆಸಿದ್ದು, ಎಸ್ಐಆರ್ ಪ್ರಕ್ರಿಯೆಯಲ್ಲಿ ಆಯೋಗದ ನಡವಳಿಕೆಯೂ ತೀವ್ರ ನಿರಾಶಾದಾಯಕವಾಗಿದೆ. ಮತ್ತು ಉದ್ದೇಶಿತ ಮತಗಳನ್ನು ಅಳಿಸುವ ಗುರಿಯನ್ನು ಹೊಂದಿದೆ ಎಂದು ಆಕ್ರೋಶ ವ್ಯಕ್ತಪಡಿಸಿದೆ.