ನವದೆಹಲಿ: ನ್ಯಾ. ಸ್ವರ್ಣಕಾಂತ ಶರ್ಮಾ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಆಕ್ಷೇಪಾರ್ಹಪೋಸ್ಟ್ ಹಾಕಿದ ಆರೋಪಕ್ಕೆ ಸಂಬಂಧಿಸಿದಂತೆ ದಾಖಲಾಗಿರುವ ಕ್ರಿಮಿನಲ್ ನ್ಯಾಯಾಂಗ ನಿಂದನೆ ಪ್ರಕರಣದಲ್ಲಿ(Contempt of court case) ಆಪ್ ಮುಖ್ಯಸ್ಥ ಕೇಜ್ರಿವಾಲ್, ಮನೀಶ್ ಸಿಸೋಡಿಯಾ, ದುರ್ಗೇಶ್ ಪಾಠಕ್, ಸಂಜಯ್ ಸಿಂಗ್, ಸೌರಭ್ ಭಾರದ್ವಾಜ್ ಹಾಗೂ ಇತರರಿಗೆ ದೆಹಲಿ ಹೈಕೋರ್ಟ್ ಮಂಗಳವಾರ(ಮೇ 19) ನೋಟಿಸ್ ಜಾರಿ ಮಾಡಿದೆ.