ಜಿಲ್ಲಾಧಿಕಾರಿ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ಪ್ರಕರಣ; ಎಸ್​ಪಿ ಹಿರಿಯ ನಾಯಕ ಅಜಂ ಖಾನ್​​ಗೆ 2 ವರ್ಷ ಜೈಲು ಶಿಕ್ಷೆ ವಿಧಿಸಿದ ನ್ಯಾಯಾಲಯ | Azam Khan

ಅಜಂ ಖಾನ್
ಅಜಂ ಖಾನ್
Published on
ಲಖನೌ: 2019ರ ಲೋಕಸಭಾ ಚುನಾವಣಾ ಪ್ರಚಾರದ ಸಮಯದಲ್ಲಿ ಅಂದಿನ ಜಿಲ್ಲಾಧಿಕಾರಿ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿದ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ಹಿರಿಯ ನಾಯಕ ಅಜಂ ಖಾನ್​​ರನ್ನು(Azam Khan) ದೋಷಿ ಎಂದು ತೀರ್ಪು ನೀಡಿರುವ ರಾಂಪುರ ಸ್ಥಳೀಯ ನ್ಯಾಯಾಲಯ, ಶನಿವಾರ(ಮೇ 16) ಎರಡು ವರ್ಷ ಜೈಲು ಶಿಕ್ಷೆ ಮತ್ತು 20,000 ರೂ. ದಂಡ ವಿಧಿಸಿದೆ.
ಸಂಸತ್ ಚುನಾವಣೆಯ ಸಮಯದಲ್ಲಿ ರಾಂಪುರದ ಭೋಟ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಪ್ರಾಸಿಕ್ಯೂಷನ್ ಪ್ರಕಾರ, ಅಜಂ ಖಾನ್ ರ್ಯಾಲಿಯನ್ನು ಉದ್ದೇಶಿಸಿ ಮಾತನಾಡುವಾಗ ಆಗಿನ ಜಿಲ್ಲಾಧಿಕಾರಿ ವಿರುದ್ಧ ಆಕ್ಷೇಪಾರ್ಹ ಹೇಳಿಕೆಗಳನ್ನು ನೀಡಿದ್ದಾರೆ ಎಂದು ಆರೋಪಿಸಲಾಗಿದೆ.
ವಾದ-ಪ್ರತಿವಾದಗಳು ಪೂರ್ಣಗೊಂಡ ನಂತರ, ನ್ಯಾಯಾಲಯವು ಅಜಂ ಖಾನ್ ಅವರನ್ನು ತಪ್ಪಿತಸ್ಥರೆಂದು ಘೋಷಿಸಿ, ಅವರಿಗೆ ಎರಡು ವರ್ಷಗಳ ಜೈಲು ಶಿಕ್ಷೆ ಮತ್ತು 20,000 ರೂ. ದಂಡ ವಿಧಿಸಿದೆ. ಇನ್ನೂ ಅವರ ವಿರುದ್ಧ ಎರಡು ಪ್ಯಾನ್ ಕಾರ್ಡ್ ಪ್ರಕರಣದಲ್ಲಿ ವಿಚಾರಣೆ ಮುಂದುವರೆದಿದೆ. ನ್ಯಾಯಾಲಯವು ಮುಂದಿನ ವಿಚಾರಣೆಯ ದಿನಾಂಕವನ್ನು ಮೇ 18 ಎಂದು ನಿಗದಿಪಡಿಸಿದೆ.
ಇತ್ತೀಚೆಗೆ, ಎರಡು ಪ್ಯಾನ್ ಕಾರ್ಡ್ ಪ್ರಕರಣದಲ್ಲಿ ಮ್ಯಾಜಿಸ್ಟ್ರೇಟ್ ನ್ಯಾಯಾಲಯವು ಅಜಮ್ ಖಾನ್ ಮತ್ತು ಅಬ್ದುಲ್ಲಾ ಅಜಮ್ ಇಬ್ಬರಿಗೂ ಏಳು ವರ್ಷಗಳ ಜೈಲು ಶಿಕ್ಷೆ ಮತ್ತು ತಲಾ 50,000 ರೂ. ದಂಡ ವಿಧಿಸಿದೆ. ಶಿಕ್ಷೆಯನ್ನು ರದ್ದುಕೋರಿ ಮತ್ತು ಪ್ರತಿವಾದಿಗಳು ಮತ್ತು ಶಿಕ್ಷೆಯನ್ನು ಹೆಚ್ಚಿಸುವಂತೆ ಕೋರಿ ಪ್ರಾಸಿಕ್ಯೂಷನ್ ಸಲ್ಲಿಸಿದ ಮೇಲ್ಮನವಿಗಳು ಜನಪ್ರತಿನಿಧಿಗಳ ಕೋರ್ಟ್​​ನಲ್ಲಿ ಬಾಕಿಯಿದೆ (ಏಜೆನ್ಸೀಸ್).
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net