ಕಳೆದ ವರ್ಷ ಬಿಹಾರ ಮತ್ತು ಇತರ ಹಲವಾರು ರಾಜ್ಯಗಳಲ್ಲಿ ಎಸ್ಐಆರ್ ನಡೆಸುವಂತೆ ಇಸಿಐ ತನ್ನ ರಾಜ್ಯದ ಅಧಿಕಾರಿಗಳಿಗೆ ನಿರ್ದೇಶನ ನೀಡಿತ್ತು. ಇದರ ಸಾಂವಿಧಾನಿಕ ಅಧಿಕಾರವನ್ನು ಪ್ರಶ್ನಿಸಿ ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್(ಎಡಿಆರ್) ಮತ್ತು ಪೀಪಲ್ಸ್ ಯೂನಿಯನ್ ಫಾರ್ ಸಿವಿಲ್ ಲಿಬರ್ಟೀಸ್(ಪಿಯುಸಿಎಲ್), ರಾಜಕೀಯ ಕಾರ್ಯಕರ್ತ ಯೋಗೇಂದ್ರ ಯಾದವ್, ಸಂಸರಾದ ಮಹುವಾ ಮೊಯಿತ್ರಾ, ಮನೋಜ್ ಝಾ, ಕೆಸಿ ವೇಣುಗೋಪಾಲ್ , ಸುಪ್ರಿಯಾ ಸುಳೆ ಸೇರಿ ಅನೇಕರು ಅರ್ಜಿ ಸಲ್ಲಿಸಿದ್ದರು.