ಈ ಕುರಿತು ಮಾತನಾಡಿರುವ ಹಿರಿಯ ಪೊಲೀಸ್ ಅಧಿಕಾರಿ ನಿಧಿನ್ ವಲ್ಸನ್, ಪ್ರಸ್ತುತ ಪರಿಸ್ಥಿತಿ ನಿಯಂತ್ರಣದಲ್ಲಿದೆ. ಸುಮಾರು 25-30 ಜನರು ಪೊಲೀಸರ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ. ಘಟನೆಯಲ್ಲಿ ಐವರು ಪೊಲೀಸರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಪರಿಸ್ಥಿತಿಯನ್ನು ನಿಯಂತ್ರಿಸಲು ನಾವು ಅಶ್ರುವಾಯು ಬಳಸಬೇಕಾಯಿತು. ಬ್ಯಾಂಕ್ವೆಟ್ ಹಾಲ್ ಮತ್ತು ಔಷಧಾಲಯವಿದ್ದ ಕಟ್ಟಡವನ್ನು ಕೆಡವಲಾಗಿದೆ. ಜನರು ಯಾವುದೇ ತೊಂದರೆ ಎದುರಿಸಬಾರದು ಎಂದು ಗಮನದಲ್ಲಿಟ್ಟುಕೊಂಡು ರಾತ್ರಿ ಕಾರ್ಯಾಚರಣೆ ನಡೆಸಲಾಗಿದೆ. ಕಲ್ಲು ತೂರಾಟ ನಡೆಸಿದವರ ವಿರುದ್ಧ ಕ್ರಮಕೈಗೊಳ್ಳುತ್ತೇವೆ ಎಂದು ತಿಳಿಸಿದ್ದಾರೆ.