ಸೋಮವಾರ ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದ ಸುಮಾರು 600 ಜನರ ಮೇಲೆ ಪ್ರಕರಣ ದಾಖಲಾಗಿದ್ದು, ಇವರಲ್ಲಿ ಕೇವಲ 100 ಜನ ಮಾತ್ರ ವಿದ್ಯಾರ್ಥಿಗಳಾಗಿದ್ದಾರೆ. ಬಾಕಿ 500 ಜನ ಹೊರಗಿನವರಾಗಿದ್ದಾರೆಂದು ತಿಳಿದು ಬಂದಿದೆ. ಸರ್ಕಾರದ ಈ ನೀತಿಯಿಂದ ಪ್ರತಿಭಟಕಾರರು ಆಕ್ರೋಶಗೊಂಡಿದ್ದು, ಇದು ನಮ್ಮ ಹೋರಾಟವನ್ನು ಹತ್ತಿಕ್ಕುವ ಪ್ರಯತ್ನವಾಗಿದೆ ಎಂದು ಹೇಳಿದ್ದಾರೆ.