ತೃಣಮೂಲ ಕಾಂಗ್ರೆಸ್ ಗುರುವಾರ ವಿಡಿಯೋ ಒಂದನ್ನು ಬಿಡುಗಡೆ ಮಾಡಿದ್ದು, ಅದರಲ್ಲಿ ಟಿಎಂಸಿಯಿಂದ ಉಚ್ಚಾಟಿತ ಶಾಸಕ ಹುಮಾಯೂನ್ ಕಬೀರ್ ಕೆಲವು ಆಘಾತಕಾರಿ ಹೇಳಿಕೆಗಳನ್ನು ನೀಡಿರುವುದು ಸೆರೆಯಾಗಿದೆ. ಸಿಎಂ ಮಮತಾ ಬ್ಯಾನರ್ಜಿ ಸರ್ಕಾರವನ್ನು ಕೆಡವಲು 1000 ಕೋಟಿ ರೂ. ಡೀಲ್ ನಡೆದಿದ್ದು, ಈಗಾಗಾಲೇ 200 ಕೋಟಿ ರೂ. ಮುಂಗಡವಾಗಿ ಬಂದಿದೆ ಎಂದು ಹೇಳುತ್ತಿರುವುದು ವಿಡಿಯೋದಲ್ಲಿದೆ.