CSKvsKKR: ಚೆನ್ನೈನ ಎಂ.ಎ. ಚಿದಂಬರಂ ಸ್ಟೇಡಿಯಂನಲ್ಲಿ ನಡೆದ ಈ ಆವೃತಿಯ 22ನೇ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡ, ಕೋಲ್ಕತ್ತಾ ನೈಟ್ ರೈಡರ್ಸ್ ವಿರುದ್ಧ 32 ರನ್‌ಗಳ ಭರ್ಜರಿ ಜಯ ದಾಖಲಿಸಿದೆ. ಈ ಗೆಲುವಿನೊಂದಿಗೆ ಸಿಎಸ್‌ಕೆ ಸತತ ಎರಡನೇ ಜಯದ ಸಂಭ್ರಮದಲ್ಲಿದ್ದರೆ, ಕೆಕೆಆರ್ ತಂಡ ಈ ಋತುವಿನಲ್ಲಿ ಇನ್ನೂ ಮೊದಲ ಗೆಲುವಿಗಾಗಿ ಚಾತಕ ಪಕ್ಷಿಯಂತೆ ಕಾಯುತ್ತಿದೆ.