ಕೋಲ್ಕತ್ತಾದ ಮಿರ್ಜಾ ಗಾಲಿಬ್ ಸ್ಟ್ರೀಟ್ನ ಐದು ಅಂತಸ್ತಿನ ಕಟ್ಟಡದಲ್ಲಿ ಬುಧವಾರ ಮುಂಜಾನೆ ಸುಮಾರು 1.45ಕ್ಕೆ ಬೆಂಕಿ ಕಾಣಿಸಿಕೊಂಡಿದೆ. ಈ ಕಟ್ಟಡದಲ್ಲಿ ಹಲವು ಹೋಟೆಲ್ಗಳಿದ್ದವು. ಬೆಂಕಿ ಕಾಣಿಸಿಕೊಂಡಾಗ ಬಹುತೇಕ ಅತಿಥಿಗಳು ಗಾಢ ನಿದ್ರೆಯಲ್ಲಿದ್ದರು. ರೂಮ್ಗಳಲ್ಲಿ ದಟ್ಟ ಹೊಗೆ ಆವರಿಸಿದ್ದರಿಂದ ಹಲವರಿಗೆ ಹೊರಬರಲು ಆಗಿಲ್ಲ. ಆ ಬಿಲ್ಡಿಂಗ್ನಲ್ಲಿ ಕಿಟಕಿಗಳು ಕಡಿಮೆ ಇದ್ದು, ರಿಯಾಗಿ ಗಾಳಿಯಾಡುತ್ತಿರಲಿಲ್ಲ ಎನ್ನಲಾಗಿದೆ. ಸುಮಾರು 80 ಮಂದಿಯನ್ನು ರಕ್ಷಿಸಲಾಗಿದ್ದು, ಹಲವರು ಗಾಯಗೊಂಡಿದ್ದಾರೆ.