ಈ ಹೇಳಿಕೆಯನ್ನು ವಿರೋಧಿಸಿ ಶಾಂತಿಯುತವಾಗಿ ಪ್ರತಿಭಟನೆ ನಡೆಸುತ್ತಿದ್ದ ವಿದ್ಯಾರ್ಥಿಗಳ ಮೇಲೆ ಆಡಳಿತ ಮಂಡಳಿ ದೌರ್ಜನ್ಯ ನಡೆಸಿದೆ. ಪ್ರೊಕ್ಟೋರಿಯಲ್ ತಂಡವು ವಿದ್ಯಾರ್ಥಿಗಳನ್ನು ಎಳೆದಾಡಿ, ಹಲ್ಲೆ ನಡೆಸಿದೆ ಎಂದು ಎಸ್ಎಫ್ಐ ಗಂಭೀರವಾಗಿ ಆರೋಪಿಸಿದೆ. ಸಾಮಾನ್ಯ ವಿದ್ಯಾರ್ಥಿಗಳ ಚಟುವಟಿಕೆಗಳಿಗೆ ನಿರ್ಬಂಧ ಹೇರುವ ಆಡಳಿತ ಮಂಡಳಿ, ಆರ್ಎಸ್ಎಸ್ ಕಾರ್ಯಕ್ರಮಗಳಿಗೆ ಕೆಂಪು ಹಾಸು ಹಾಸುತ್ತಿರುವುದು ಏಕೆ? ಎಂಬ ಪ್ರಶ್ನೆಯನ್ನು ವಿದ್ಯಾರ್ಥಿಗಳು ಎತ್ತಿದ್ದಾರೆ.