ಮತದಾನವು ಪ್ರಜಾಪ್ರಭುತ್ವದ ಹಬ್ಬವಾಗಬೇಕಿತ್ತು, ಆದರೆ ಬಿಜೆಪಿ ಅದನ್ನು ಸಂಪೂರ್ಣವಾಗಿ ಹಾಳುಮಾಡಿದೆ. ನಮ್ಮ ಜನರು ಪ್ರಾಣತ್ಯಾಗಕ್ಕೂ ಸಹ ಸಿದ್ಧರಿದ್ದು, ಆದರೆ ಸ್ಥಳ ಬಿಟ್ಟು ಕದಲುವುದಿಲ್ಲ ಎಂದರು. ಎರಡನೇ ಹಂತದ ಮತದಾನ ಆರಂಭವಾದ ಮೊದಲ ಎರಡು ಗಂಟೆಗಳಲ್ಲಿ ಸುಮಾರು 18% ಮತದಾನ ದಾಖಲಾಗಿದ್ದು, ಹೌರಾ ಸೇರಿದಂತೆ 142 ಕ್ಷೇತ್ರಗಳಲ್ಲಿ ಮತದಾನ ನಡೆಯುತ್ತಿದೆ. ಹೌರಾದ ಕೆಲವು ಮತಗಟ್ಟೆಗಳಲ್ಲಿ ಇವಿಎಂ (EVM) ತಾಂತ್ರಿಕ ದೋಷ ಕಾಣಿಸಿಕೊಂಡಿದ್ದು, ಇದರಿಂದ ಮತದಾನ ಪ್ರಕ್ರಿಯೆ ವಿಳಂಬವಾಗಿ ಮತದಾರರಲ್ಲಿ ಗೊಂದಲ ಮತ್ತು ಆಕ್ರೋಶಕ್ಕೆ ಕಾರಣವಾಗಿದೆ ಎಂದು ವರದಿಯಾಗಿದೆ(ಏಜೆನ್ಸೀಸ್).