ಅಜಿತ್ ಪವಾರ್ ಸಾವು 'ರಾಜಕೀಯ ಪಿತೂರಿ' ಎಂದ ಮಮತಾ; ಸುಪ್ರೀಂ ಕೋರ್ಟ್ ತನಿಖೆಗೆ ಪಶ್ಚಿಮ ಬಂಗಾಳ ಸಿಎಂ ಆಗ್ರಹ! Ajit Pawar

ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್,  ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ
ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್, ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ
Published on

ಪ್ರಮುಖ ಮುಖ್ಯಾಂಶಗಳು

  • ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ವಿಮಾನ ಅಪಘಾತದಲ್ಲಿ ನಿಧನ
  • ಅಜಿತ್ ಪವಾರ್ ಅವರ ಸಾವಿನ ಸುದ್ದಿ ನನಗೆ ಆಘಾತವನ್ನುಂಟು ಮಾಡಿದೆ
  • ಪವಾರ್​ ಅವರ ಸಾವಿನ ಹಿಂದೆ ರಾಜಕೀಯ ಪಿತೂರಿ ಇದೆ
  • ಸುಪ್ರೀಂ ಕೋರ್ಟ್ ಮೇಲ್ವಿಚಾರಣೆಯಲ್ಲಿ ತನಿಖೆ ನಡೆಸಿ
ಪಶ್ಚಿಮ ಬಂಗಾಳ: ಬುಧವಾರ (ಜ.28) ಬೆಳಿಗ್ಗೆ ವಿಮಾನ ಅಪಘಾತದಲ್ಲಿ ನಿಧನರಾದ ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ (Ajit Pawar) ಸಾವಿನ ಹಿಂದೆ ಪಿತೂರಿ ನಡೆದಿದೆ ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಆರೋಪಿಸಿದ್ದಾರೆ.
ಉಪಮುಖ್ಯಮಂತ್ರಿ ಅಜಿತ್ ಪವಾರ್ ಅವರ ಸಾವಿನ ಸುದ್ದಿ ಕೇಳಿ ನನಗೆ ಬಹಳ ದುಃಖದ ಜತೆಗೆ ಆಘಾತವನ್ನುಂಟು ಮಾಡಿದೆ. ಅಜಿತ್​ ಅವರ ಸಾವಿನಿಂದ ಈ ದೇಶದ ನಾಗರಿಕರ ಜತೆ ರಾಜಕೀಯ ನಾಯಕರಿಗೂ ಸಹ ಯಾವುದೇ ಸುರಕ್ಷತೆ ಮತ್ತು ಭದ್ರತೆ ಇಲ್ಲದಂತಾಗಿದೆ ಎಂದು ಮಮತಾ ಬ್ಯಾನರ್ಜಿ ಅಕ್ರೋಶ ಹೊರಹಾಕಿದ್ದಾರೆ.
ಅಜಿತ್​ ಪವಾರ್​ ಅವರು ಬಿಜೆಪಿ ತೊರೆಯಲು ಸಿದ್ಧರಾಗಿದ್ದರು ಎಂದು ನನಗೆ ಮಾಹಿತಿ ದೊರೆತಿತ್ತು, ಆದ್ದರಿಂದ ಅವರ ಸಾವು ರಾಜಕೀಯ ಪಿತೂರಿಯ ಭಾಗವಾಗಿರುವ ಸಾಧ್ಯತೆಯಿದೆ ಎಂದ ಬ್ಯಾನರ್ಜಿ, ಈ ವಿಮಾನ ದುರಂತದ ಕುರಿತು ಸುಪ್ರೀಂ ಕೋರ್ಟ್ ಮೇಲ್ವಿಚಾರಣೆಯಲ್ಲಿ ತನಿಖೆ ನಡೆದು, ವರದಿಯನ್ನು ಸಾರ್ವಜನಿಕ ಪ್ರಕಟಣೆ ಮಾಡಬೇಕೆಂದು ಆಗ್ರಹಿಸಿದ್ದಾರೆ.
ಮಹಾರಾಷ್ಟ್ರದಲ್ಲಿ ಮೂರು ದಿನ ಶೋಕಾಚರಣೆ
ವಿಮಾನ ಅಪಘಾತದಲ್ಲಿ ನಿಧನರಾದ ಉಪಮುಖ್ಯಮಂತ್ರಿ ಅಜಿತ್ ಪವಾರ್ ಅವರ ಗೌರವಾರ್ಥವಾಗಿ ಮಹಾರಾಷ್ಟ್ರದಾದ್ಯಂತ ಮೂರು ದಿನಗಳ ರಾಜ್ಯ ಶೋಕಾಚರಣೆಯನ್ನು ಸರ್ಕಾರ ಘೋಷಿಸಿದೆ.
ಸರ್ಕಾರದ ಸೂಚನೆಯಂತೆ, ಜನವರಿ 28 ರಿಂದ ಜನವರಿ 30 ರವರೆಗೆ ರಾಜ್ಯ ಶೋಕಾಚರಣೆಯನ್ನು ಆಚರಿಸಲಾಗುವುದು, ಈ ಸಮಯದಲ್ಲಿ ಎಲ್ಲಾ ಕಟ್ಟಡಗಳ ಮೇಲೆ ರಾಷ್ಟ್ರಧ್ವಜವನ್ನು ಅರ್ಧಮಟ್ಟಕ್ಕೆ ಹಾರಿಸಲಾಗುತ್ತದೆ ಎಂದು ಇಲಾಖೆ ಅಧಿಕೃತವಾಗಿ ಘೋಷಿಸಿದೆ.
ಶೋಕಾಚರಣೆಯ ಸಮಯದಲ್ಲಿ ಯಾವುದೇ ಅಧಿಕೃತ ಮನರಂಜನಾ ಕಾರ್ಯಕ್ರಮಗಳಿಗೆ ಅವಕಾಶ ಇರುವುದಿಲ್ಲ ಎಂದು ಹೇಳಿದ್ದು, ಉಪಮುಖ್ಯಮಂತ್ರಿಗಳ ನಿಧನದ ಕಾರಣ ಮಹಾರಾಷ್ಟ್ರದಾದ್ಯಂತ ಎಲ್ಲಾ ರಾಜ್ಯ ಸರ್ಕಾರಿ ಕಚೇರಿಗಳು ಬುಧವಾರ (ಜ.28) ಮುಚ್ಚಲ್ಪಡುತ್ತವೆ ಎಂದು ಇಲಾಖೆ ಘೋಷಿಸಿದೆ.
ಅಧೀನ ಕಾರ್ಯದರ್ಶಿ ಎಚ್.ಪಿ.ಬಾವಿಸ್ಕರ್ ಅವರ ಸಹಿಯಡಿಯಲ್ಲಿ ಹೊರಡಿಸಲಾದ ಸಂದೇಶವು ಸಂಬಂಧಪಟ್ಟ ಎಲ್ಲಾ ಅಧಿಕಾರಿಗಳಿಗೆ ತಕ್ಷಣ ಕ್ರಮ ಕೈಗೊಳ್ಳಲು ಮತ್ತು ಸೂಚನೆಗಳನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ನಿರ್ದೇಶಿಸಿದೆ.
ಬುಧವಾರ ಬೆಳಿಗ್ಗೆ ಮಹಾರಾಷ್ಟ್ರದ ಪುಣೆ ಜಿಲ್ಲೆಯಲ್ಲಿ ಅಜಿತ್ ಪವಾರ್ (66) ಮತ್ತು ಇತರ ನಾಲ್ವರು ವ್ಯಕ್ತಿಗಳು ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಪವಾರ್ ಮತ್ತು ಇತರರನ್ನು ಕರೆದೊಯ್ಯುತ್ತಿದ್ದ ವಿಮಾನ ಬಾರಾಮತಿ ಬಳಿ ಇಳಿದಾಗ ಈ ಘಟನೆ ಸಂಭವಿಸಿದೆ ಎಂದು ಅವರು ಹೇಳಿದ್ದಾರೆ,(ಏಜನ್ಸೀಸ್).
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net