ವಿಶೇಷಚೇತನರಿಗೆ ಪ್ರತ್ಯೇಕ ನಿಗಮ-ಮಂಡಳಿ ರಚನೆಗೆ ಸಿಎಂಗೆ ಪತ್ರ ಬರೆದ ಸಚಿವ ಸಂತೋಷ್ ಲಾಡ್ | Santosh Lad

ಕಾರ್ಮಿಕ ಸಚಿವ ಸಂತೋಷ್ ಲಾಡ್
ಕಾರ್ಮಿಕ ಸಚಿವ ಸಂತೋಷ್ ಲಾಡ್
Published on
ಬೆಂಗಳೂರು: ವಿಶೇಷಚೇತನರಿಗೆ ಸರ್ಕಾರದ ಸವಲತ್ತುಗನ್ನು ತ್ವರಿತವಾಗಿ ಮತ್ತು ನೇರವಾಗಿ ತಲುಪಿಸಲು ಸಾಧ್ಯವಾಗುವಂತಾಗಲು ಪ್ರತ್ಯೇಕ ನಿಗಮ ಅಥವಾ ಮಂಡಳಿಯನ್ನು ಸ್ಥಾಪಿಸುವಂತೆ ಶುಕ್ರವಾರ(ನ. 29) ಸಿಎಂಗೆ ಕಾರ್ಮಿಕ ಇಲಾಖೆ ಮತ್ತು ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ್ ಲಾಡ್(Santosh Lad) ಪತ್ರ ಬರೆದಿದ್ದಾರೆ.
ಸಂತೋಷ್ ಲಾಡ್ ಪತ್ರದಲ್ಲಿ, ಸದ್ಯ ವಿಶೇಷಚೇತನರ ಇಲಾಖೆಯು ಮಹಿಳಾ ಮತ್ತು ಮಕ್ಕಳು ಅಭಿವೃದ್ಧಿ ಹಾಗೂ ಹಿರಿಯ ನಾಗರಿಕರನ್ನು ಒಳಗೊಂಡ ಇಲಾಖೆಯಲ್ಲಿದೆ. ಇದು ಬಹಳ ದೊಡ್ಡ ಇಲಾಖೆಯಾಗಿರುವುದರಿಂದ ತ್ವರಿತಗತಿಯಲ್ಲಿ ವಿಶೇಷಚೇತರ ಹಕ್ಕುಗಳ ಜಾರಿಗೊಳಿಸಲು, ಅವರಿಗೆ ಸೂಕ್ತ ಕಾಲದಲ್ಲಿ ಸೌಲಭ್ಯಗಳನ್ನು ತಲುಪಿಸಲು ತೊಂದರೆಯಾಗುತ್ತಿದೆ ಎಂದು ಉಲ್ಲೇಖಿಸಿದ್ದಾರೆ. 
ಸರ್ಕಾರವು ವಿಶೇಷಚೇತನರಿಗೆ ಎಲ್ಲ ರೀತಿಯ ಹಕ್ಕುಗಳನ್ನು ನೀಡಿದ್ದರೂ ಆ ಹಕ್ಕುಗಳಿಗೆ ತಕ್ಕಂತೆ ಸೇವೆ ಒದಗಿಸಲು ವಿಳಂಬವಾಗುತ್ತಿರುವುದಕ್ಕೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ವ್ಯಾಪ್ತಿ ಮತ್ತು ವಿಸ್ತಾರವೂ ಮತ್ತೊಂದು ಕಾರಣವಿರಬಹುದೆಂದು ಭಾವಿಸಬಹುದಾಗಿದೆ. ಒಂದು ಪ್ರತ್ಯೇಕ ನಿಗಮ ಅಥವಾ ಮಂಡಳಿಯನ್ನು ಸ್ಥಾಪಿಸಿದರೆ ಸವಲತ್ತುಗಳನ್ನು ನೇರವಾಗಿ ಮತ್ತು ತ್ವರಿತವಾಗಿ ತಲುಪಿಸಲು ಸಾಧ್ಯವಾಗುತ್ತದೆ. ಈ ಕುರಿತು ಸಂಬಂಧಪಟ್ಟವರಿಗೆ ನಿರ್ದೇಶನ ನೀಡುವಂತೆ ಎಂದು ಮನವಿ ಮಾಡಿದ್ದಾರೆ. 
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net