ನನ್ನ ಹೋರಾಟ ನಿಲ್ಲಲ್ಲ: 'ಚಲೋ ಸಂಸದ್​​' ಪ್ರತಿಭಟನೆ; ಉಪವಾಸ ಸತ್ಯಾಗ್ರಹ ಹಿಂಪಡೆಯದ ಸೋನಮ್​ ವಾಂಗ್​ಚುಕ್​! Sonam Wangchuk

 ಉಪವಾಸ ಸತ್ಯಾಗ್ರಹ ಹಿಂಪಡೆಯಲು ಸೋನಮ್ ವಾಂಗ್‌ಚುಕ್ ನಿರಾಕರಣೆ
ಉಪವಾಸ ಸತ್ಯಾಗ್ರಹ ಹಿಂಪಡೆಯಲು ಸೋನಮ್ ವಾಂಗ್‌ಚುಕ್ ನಿರಾಕರಣೆ
Published on

ಪ್ರಮುಖ ಮುಖ್ಯಾಂಶಗಳು

  • ದೇಶದಲ್ಲಿ ನಡೆಯುತ್ತಿರುವ ಪರೀಕ್ಷಾ ಅಕ್ರಮಗಳ ವಿರುದ್ಧ 'ಚಲೋ ಸಂಸದ್' ಪ್ರತಿಭಟನೆ
  • ದೆಹಲಿಯಲ್ಲಿ ತೀವ್ರಗೊಂಡ ಜನಾಕ್ರೋಶ
  • ಕೇಂದ್ರದ ಸಂಧಾನಕ್ಕೂ ಒಪ್ಪದ ಪರಿಸರವಾದಿ!
  • ಉಪವಾಸ ಸತ್ಯಾಗ್ರಹ ಹಿಂಪಡೆಯಲು ಸೋನಮ್ ವಾಂಗ್‌ಚುಕ್ ನಿರಾಕರಣೆ
ನವದೆಹಲಿ: ನೀಟ್​ ಸೇರಿದಂತೆ ದೇಶದಲ್ಲಿ ನಡೆಯುತ್ತಿರುವ ಪರೀಕ್ಷಾ ಅಕ್ರಮಗಳನ್ನು ವಿರೋಧಿಸಿ ಕಾಕ್ರೋಚ್​ ಜನತಾ ಪಾರ್ಟಿ ಸೋಮವಾರ (ಜು.20) ಜಂತರ್​ ಮಂತರ್​ನಿಂದ ಸಂಸತ್​ ಭವನದವರೆಗೆ ಪ್ರತಿಭಟನಾ ರ‍್ಯಾಲಿಯನ್ನು ಹಮ್ಮಿಕೊಂಡಿದೆ.
ಈ ಪ್ರತಿಭಟನೆಯ ತೀವ್ರತೆಯನ್ನು ಅರಿತ ಕೇಂದ್ರ ಸರ್ಕಾರ ಕಾಕ್ರೋಜ್​ ಜನತಾ ಪಾರ್ಟಿಯ ನಾಯಕರೊಂದಿಗೆ ಮಾತುಕತೆಗೆ ಮುಂದಾಗಿದ್ದಾರೆ. ಅಂತೆಯೇ ಆರೋಗ್ಯ ಸಚಿವ ಜೆ.ಪಿ. ನಡ್ಡಾ ಸಿಜೆಪಿಯ ವಕ್ತಾರರೊಂದಿಗೆ ಚರ್ಚೆ ನಡೆಸಿ ಅವರ ಬೇಡಿಕೆಗಳನ್ನು ಕೇಳಿಸಿಕೊಂಡಿದ್ದಾರೆ.
ಕೇಂದ್ರ ಸರ್ಕಾರ ಮಾತುಕತೆಗೆ ಮುಂದಾಗುತ್ತಿದ್ದಂತೆ ಅಭಿಜಿತ್​ ದೀಪ್ಕೆ ಕೂಡ ಎರಡು ದಿನದಿಂದ ನಡೆಸುತ್ತಿದ್ದ ಉಪವಾಸ ಸತ್ಯಾಗ್ರಹವನ್ನು ಹಿಂತೆಗೆದುಕೊಂಡಿದ್ದಾರೆ. ಆದರೆ ಸೋನಮ್​ ವಾಂಗ್​ಚುಕ್​ (Sonam Wangchuk) ಮಾತ್ರ ಇದಕ್ಕೆ ಒಪ್ಪಿಗೆ ನೀಡಲು ನಿರಾಕರಿಸಿದ್ದು, ತಮ್ಮ ಉಪವಾಸ ಸತ್ಯಾಗ್ರಹ ಮುಂದುವರಿಯಲಿದೆ ಎಂದು ತಿಳಿಸಿದ್ದಾರೆ.

ನನ್ನ ಹೋರಾಟ ನಿಲ್ಲುವುದಿಲ್ಲ!

ವಿದ್ಯಾರ್ಥಿಗಳು ತಮ್ಮ ಹಕ್ಕಿಗೋಸ್ಕರ ಈ ಹೋರಾಟವನ್ನು ಮಾಡುತ್ತಿದ್ದಾರೆ. ದಯವಿಟ್ಟು ಸರ್ಕಾರ ಅವರ ಮನವಿಯನ್ನು ಕೇಳಿಸಿಕೊಳ್ಳಬೇಕು. ಪ್ರತಿಭಟನಾಕಾರರು ಕೂಡ ತಾಳ್ಮೆ ಹಾಗೂ ಸಂಯಮದಿಂದ ವರ್ತಿಸಬೇಕೆಂದು ಸೋನಮ್​ ವಾಂಗ್​ಚುಕ್​ ಮನವಿ ಮಾಡಿದ್ದಾರೆ.
ವಿದ್ಯಾರ್ಥಿಗಳು ಶಾಂತಯುತವಾಗಿ ಪ್ರತಿಭಟನೆ ಮಾಡುತ್ತಿದ್ದರೂ ಕೂಡ ಪೊಲೀಸರು ಬಲ ಪ್ರದರ್ಶನ ಮಾಡಿದ್ದಾರೆ, ಲಾಠಿ ಚಾರ್ಜ್​, ಆಶ್ರುವಾಯುವನ್ನು ಪ್ರಯೋಗಿಸಿದ್ದಾರೆ. ಹೀಗಾಗಿ ಈ ವಿಷಯ ಸಂಪೂರ್ಣವಾಗಿ ಕೊನೆಕಾಣುವವರೆಗೆ ನಾನು ಉಪವಾಸವನ್ನು ಮುಂದುವರಿಸುತ್ತೆನೆಂದು ವಾಂಗ್​ಚುಕ್​ ಸೋಷಿಯಲ್​ ಮೀಡಿಯಾನಲ್ಲಿ ಹಂಚಿಕೊಂಡಿದ್ದಾರೆ.

ಆಸ್ಪತ್ರೆಯಲ್ಲಿರುವ ವಾಂಗ್​ಚುಕ್​!

ದೇಶದಲ್ಲಿ ನಡೆಯುತ್ತಿರುವ ಪೇಪರ್ ಸೋರಿಕೆ ತಡೆಗೆ ಸಂಬಂಧಿಸಿದಂತೆ ಶಿಕ್ಷಣ ಸಚಿವ ಧಮೇಂದ್ರ ಪ್ರಧಾನ್​ ಅವರ ರಾಜೀನಾಮೆಯನ್ನು ಆಗ್ರಹಿಸಿ ಪರಿಸರವಾದಿ ಸೋನಮ್​ ವಾಂಗ್​ಚುಕ್​​ ಕಳೆದ 23 ದಿನಗಳಿಂದ ಉಪವಾಸ ಸತ್ಯಾಗ್ರಹವನ್ನು ನಡೆಸುತ್ತಿದ್ದಾರೆ. ಇವರ ಆರೋಗ್ಯ ದಿನ ಕಳೆದಂತೆ ಹದಗೆಟ್ಟ ಹಿನ್ನಲೆ ದೆಹಲಿ ಹೈಕೋರ್ಟ್​ಗೆ ಸಲ್ಲಿಕೆಯಾಗಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಾಲಯ ವಾಂಗ್​ಚುಕ್​ ಅವರ ಆರೋಗ್ಯದ ಜವಾಬ್ದಾರಿ ಸರ್ಕಾರದ್ದಾಗಿದೆ ಎಂದು ತಿಳಿಸಿತ್ತು.
ಈ ಹಿನ್ನಲೆಯಲ್ಲಿ, ಶನಿವಾರ (ಜು.18) ಬೆಳಿಗ್ಗೆ ಪ್ರತಿಭಟನಾ ಸ್ಥಳಕ್ಕೆ ಆಗಮಿಸಿದ ದೆಹಲಿ ಪೊಲೀಸರು ವಾಂಗ್​ಚುಕ್​ ಅವರನ್ನು ಜಂತರ್​​-ಮಂತರ್​ನಿಂದ ಸಫ್ದರ್​ಜಂಗ್​ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಮುಂದುವರಿಸಿದ್ದಾರೆ, (ಏಜನ್ಸೀಸ್).
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net