ನಾಸಿಕ್‌ನ ಟಿಸಿಎಸ್ ಘಟಕದಲ್ಲಿ ಮಹಿಳಾ ಉದ್ಯೋಗಿಗಳಿಗೆ ಮಾನಸಿಕ ಕಿರುಕುಳ, ಶೋಷಣೆ ಮತ್ತು ಬಲವಂತದ ಮತಾಂತರ ಯತ್ನಕ್ಕೆ ಸಂಬಂಧಿಸಿದಂತೆ ಒಟ್ಟು 9 ಪ್ರಕರಣಗಳು ದಾಖಲಾಗಿದ್ದು, ಇವುಗಳ ತನಿಖೆಯನ್ನು ಪೊಲೀಸರ ವಿಶೇಷ ತನಿಖಾ ತಂಡ ನಡೆಸುತ್ತಿದೆ. ಪ್ರಸ್ತುತ ಪ್ರಕರಣವು ಡಿಯೋಲಾಲಿ ಕ್ಯಾಂಪ್ ಪೊಲೀಸ್ ಠಾಣೆಯಲ್ಲಿ ಭಾರತೀಯ ನ್ಯಾಯ ಸಂಹಿತೆ (BNS) ಸೆಕ್ಷನ್ 69, 65, 299 ಮತ್ತು ಎಸ್‌ಸಿ/ಎಸ್‌ಟಿ ದೌರ್ಜನ್ಯ ತಡೆ ಕಾಯ್ದೆಯಡಿ ದಾಖಲಾಗಿದೆ.