ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರದಾನ ಸಮಾರಂಭ: ಮೊದಲ ಬಾರಿಗೆ ದೆಹಲಿಯಿಂದ ಗುಜರಾತ್​​ಗೆ ಶಿಫ್ಟ್​ | National Film Awards Ceremony

ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
Published on: 
ನವದೆಹಲಿ: ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರದಾನ(National Film Awards Ceremony) ಸಮಾರಂಭದ ದಶಕಗಳ ಸಂಪ್ರದಾಯವನ್ನು ಮುರಿಯುವ ಸಾಧ್ಯತೆಯಿದೆ. ದಶಕಗಳಿಂದ ದೆಹಲಿಯಲ್ಲೇ ನಡೆಯುತ್ತಿದ್ದ ಪ್ರಧಾನ ಸಮಾರಂಭವು  ಇದೇ ಮೊದಲ ಬಾರಿಗೆ ಗುಜರಾತ್​ಗೆ ಸ್ಥಳಾಂತರಗೊಳ್ಳುವ ಸಾಧ್ಯತೆಯಿದೆ ಎಂದು ವರದಿಯಾಗಿದೆ.
ಏಕತಾ ಪ್ರತಿಮೆ ಇರುವ ಗುಜರಾತ್‌ನ ಏಕ್ತಾ ನಗರವು 72ನೇ ಆವೃತ್ತಿಯನ್ನು ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸುವ ಸಾಧ್ಯತೆಯಿದೆ. ಈ ತಿಂಗಳ ಕೊನೆಯಲ್ಲಿ ಗುಜರಾತ್‌ಗೆ ಭೇಟಿ ನೀಡುವ ಸಂದರ್ಭದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಪ್ರಶಸ್ತಿಗಳನ್ನು ಪ್ರದಾನ ಮಾಡುವ ನಿರೀಕ್ಷೆಯಿದೆ ಎನ್ನಲಾಗಿದೆ.
ವರದಿಗಳ ಪ್ರಕಾರ, ರಾಷ್ಟ್ರಪತಿಯವರು ಭೇಟಿಯ ಭಾಗವಾಗಿ ಏಕ್ತಾ ನಗರಕ್ಕೆ ಪ್ರಯಾಣಿಸಿ ಅಲ್ಲಿ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳನ್ನು ಪ್ರದಾನ ಮಾಡುವ ಸಾಧ್ಯತೆಯಿದೆ. ಇತ್ತೀಚಿನ ವರ್ಷಗಳಲ್ಲಿ ಸಮಾರಂಭವನ್ನು ದೆಹಲಿಯ ವಿಜ್ಞಾನ ಭವನದಲ್ಲಿ ನಡೆಸಲಾಗುತ್ತಿತ್ತು. ರಾಷ್ಟ್ರಪತಿಗಳು ಸಾಂಪ್ರದಾಯಿಕವಾಗಿ ವಿಜೇತರಿಗೆ ಗೌರವಗಳನ್ನು ಪ್ರದಾನ ಮಾಡುತ್ತಾರೆ.
ಕಳೆದ ಜುಲೈನಲ್ಲಿ ನವದೆಹಲಿಯಲ್ಲಿ 72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳನ್ನು ಘೋಷಿಸಲಾಯಿತು . 2024ರಲ್ಲಿ ಬಿಡುಗಡೆಯಾದ ಆರ್ಟಿಕಲ್ 370 ಅತ್ಯುತ್ತಮ ಚಲನಚಿತ್ರ ಪ್ರಶಸ್ತಿ ಮತ್ತು ಯಾಮಿ ಗೌತಮ್ ಅವರಿಗೆ ಅತ್ಯುತ್ತಮ ನಟಿ ಪ್ರಶಸ್ತಿಯನ್ನು ಘೋಷಣೆ ಮಾಡಲಾಗಿದೆ. ಮಮ್ಮುಟ್ಟಿ ಮತ್ತು ಕಾರ್ತಿಕ್ ಆರ್ಯನ್ ಅತ್ಯುತ್ತಮ ನಟ ಪ್ರಶಸ್ತಿಯನ್ನು ಹಂಚಿಕೊಂಡಿದ್ದಾರೆ.
ಹಾಗೆಯೇ ಸ್ಟ್ಯಾಚ್ಯೂ ಆಫ್ ಯೂನಿಟಿ-ಏಕ್ತಾ ಕಾ ಪ್ರತೀಕ್ ಚಿತ್ರಕ್ಕಾಗಿ ಚಲನಚಿತ್ರ ನಿರ್ಮಾಪಕ ಆನಂದ್ ಎಲ್ ರೈ ಅವರು ನಾನ್-ಫೀಚರ್ ವಿಭಾಗದಲ್ಲಿ ಅತ್ಯುತ್ತಮ ನಿರ್ದೇಶನ ಪ್ರಶಸ್ತಿಯನ್ನು ಗೆದ್ದಿದ್ದಾರೆ (ಏಜೆನ್ಸೀಸ್).