ರಾಜಸ್ಥಾನದ ಸೀಕರ್ನಲ್ಲಿ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣ ದೊಡ್ಡ ಮಟ್ಟದಲ್ಲಿ ಸದ್ದು ಮಾಡಿದ ಹಿನ್ನೆಲೆ ಮರು ಪರೀಕ್ಷೆ ನಡೆಸಲು ಸೂಚನೆ ನೀಡಲಾಗಿದೆ. ಪರೀಕ್ಷೆ ಬರೆದಿದ್ದ 22,05,035 ವಿದ್ಯಾರ್ಥಿಗಳಿಗೆ ಇದರಿಂದ ಆಘಾತ ಎದುರಾದರೂಯಾವ ವಿದ್ಯಾರ್ಥಿಗೂ ಅನ್ಯಾಯವಾಗದಿರಲಿ ಎಂಬ ನಿಟ್ಟಿನಲ್ಲಿ ಸದ್ಯ ಎನ್ಟಿಎ ಈ ನಿರ್ಧಾರವನ್ನು ಕೈಗೊಂಡಿದ್ದು, ಸೋರಿಕೆಯ ಪ್ರಕರಣವನ್ನು ಗಮನಿಸಿದ ಕೇಂದ್ರ ಸರ್ಕಾರ ಸಿಬಿಐಗೆ ತನಿಖೆ ನಡೆಸುವಂತೆ ಆದೇಶಿಸಿದೆ. ನೀಟ್ ಮರು ಪರೀಕ್ಷೆಯು ಜೂನ್ 21 ರಂದು ನಡೆಯಲಿದೆ ಎಂದು ಎನ್ಟಿಎ ತಿಳಿಸಿದೆ, (ಏಜನ್ಸೀಸ್).