ಆಸ್ಟ್ರೇಲಿಯಾ ಮಾಧ್ಯಮಗಳ ವರದಿ ಪ್ರಕಾರ, ಜುಲೈ 9ರಂದು ಪ್ರಧಾನಿ ಮೋದಿ ಮೆಲ್ಬೋರ್ನ್ಗೆ ಭೇಟಿ ನೀಡುವ ಕೆಲವೇ ದಿನಗಳ ಮೊದಲು ಅವರನ್ನು ಗುರಿಯಾಗಿಸಿಕೊಂಡು ಆನ್ಲೈನ್ನಲ್ಲಿ ಕೊಲೆ ಬೆದರಿಕೆ ಹಾಕಲಾಗಿದ್ದು, ಈ ಬಗ್ಗೆ ಆಸ್ಟ್ರೇಲಿಯಾದ ಫೆಡರಲ್ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಅಧಿಕಾರಿಗಳು ಕೊಲೆ ಬೆದರಿಕೆ ಕಾಮೆಂಟ್ ಹಾಕಿದ ಆರೋಪಿಯ ಸಾಮಾಜಿಕ ಐಪಿ ವಿಳಾಸವನ್ನು ಪತ್ತೆಹಚ್ಚಿದ್ದಾರೆ ಎಂದು ವರದಿಗಳು ಉಲ್ಲೇಖಿಸಿವೆ.