ಈ ದಾಳಿಗೆ ತಕ್ಕ ಪ್ರತ್ಯುತ್ತರ ನೀಡಲು ಭಾರತ ಸರ್ಕಾರವು ಪಾಕಿಸ್ತಾನದ ವಿರುದ್ಧ ರಾಜತಾಂತ್ರಿಕ ಹಾಗೂ ಆರ್ಥಿಕ ನಿರ್ಬಂಧಗಳನ್ನು ಹೇರಿದ್ದಲ್ಲದೆ, ಸಿಂಧೂ ನದಿ ನೀರು ಹಂಚಿಕೆ ಒಪ್ಪಂದವನ್ನು ಅಮಾನತುಗೊಳಿಸಿತು. ಅಷ್ಟೇ ಅಲ್ಲದೆ, ಭಾರತೀಯ ಸೇನೆಯು ಮೇ 20255 ರಲ್ಲಿ ಪಾಕಿಸ್ತಾನ ಪ್ರೇರಿತ ಭಯೋತ್ಪಾದಕ ಮೂಲಸೌಕರ್ಯಗಳ ಮೇಲೆ ‘ಆಪರೇಷನ್ ಸಿಂಧೂರ್’ (Operation Sindoor) ಹೆಸರಿನಲ್ಲಿ ವೈಮಾನಿಕ ಕಾರ್ಯಚರಣೆ ನಡೆಸಿ ಸುಮಾರು 250-300 ಉಗ್ರರನ್ನು ಸದೆಬಡೆಯಿತು, (ಏಜನ್ಸೀಸ್).