ಬುಧವಾರ ಇನ್‌ಸ್ಟಾಗ್ರಾಮ್‌ನಲ್ಲಿ ಶೇರ್ ಮಾಡಿದ ಸುದೀರ್ಘ ಪೋಸ್ಟ್‌ನಲ್ಲಿ, ಪ್ರತಿಭಟನೆಯ ವೇಳೆ ಗಾಯಗೊಂಡ ವಿದ್ಯಾರ್ಥಿಗಳು ಹಾಗೂ ಅವರ ಕುಟುಂಬಸ್ಥರಿಗೆ ಸಾಂತ್ವನ ಹೇಳಿರುವ ಸಲ್ಮಾನ್ ಖಾನ್, ತಮ್ಮ ಸಂಪೂರ್ಣ ಬೆಂಬಲವನ್ನು ವ್ಯಕ್ತಪಡಿಸಿದ್ದಾರೆ. ಪರೀಕ್ಷಾ ಪೇಪರ್ ಲೀಕ್ ವಿಚಾರವನ್ನು ಅತ್ಯಂತ ಗಂಭೀರ ಸಮಸ್ಯೆ ಎಂದು ಬಣ್ಣಿಸಿರುವ ಅವರು, ಶಿಕ್ಷಣ ವ್ಯವಸ್ಥೆಯಲ್ಲಿ ಸುಧಾರಣೆ ತರಲು ಒಗ್ಗಟ್ಟಿನಿಂದ ಹೋರಾಡುತ್ತಿರುವ ವಿದ್ಯಾರ್ಥಿಗಳ ಧೈರ್ಯವನ್ನು ಶ್ಲಾಘಿಸಿದ್ದಲ್ಲದೆ, ಅವರಿಗೆ ಸಾಥ್ ನೀಡುತ್ತಿರುವ ಹೆತ್ತವರಿಗೂ ಧನ್ಯವಾದ ತಿಳಿಸಿದ್ದಾರೆ. ಅಷ್ಟೇ ಅಲ್ಲದೆ, ಈ ಆಂದೋಲನ ಮತ್ತು ಪ್ರತಿಭಟನೆಯೇ ಸರಿಯಾದ ಮಾರ್ಗ ಎಂದು ಉಲ್ಲೇಖಿಸಿರುವ ಸಲ್ಲು, ದೇಶದ ಶಿಕ್ಷಣದ ಮೇಲಿರುವ ವಿದ್ಯಾರ್ಥಿಗಳ ಈ ಬದ್ಧತೆ ಹಾಗೂ ಕಾಳಜಿ ಇಡೀ ಭಾರತವೇ ಹೆಮ್ಮೆಪಡುವಂತೆ ಮಾಡುತ್ತದೆ ಎಂದು ಬರೆದುಕೊಂಡಿದ್ದಾರೆ.