ಲಖನೌ: ಐತಿಹಾಸಿಕ ಪ್ರೇಮಸೌಧ ತಾಜ್ ಮಹಲ್ಗೆ(Taj Mahal) ಸಂಬಂಧಿಸಿದ ವಿವಾದ ಮತ್ತೆ ಮುನ್ನಲೆಗೆ ಬಂದಿದ್ದು, ಅದು ತಾಜ್ ಮಹಲ್ ಅಲ್ಲ, ತೇಜೋ ಮಹಾಲಯ ಎಂದು ಘೋಷಿಸುವಂತೆ ಸಲ್ಲಿಸಿದ ಅರ್ಜಿಯ ವಿಚಾರಣೆ ನಡೆಸಿದ ಅಲಹಾಬಾದ್ ಹೈಕೋರ್ಟ್, ಕೇಂದ್ರ ಸರ್ಕಾರ ಮತ್ತು ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆಗೆ ನೋಟಿಸ್ ಜಾರಿ ಮಾಡಿದೆ.