ನಾಳೆ ಪ್ರಧಾನಿ ಮೋದಿಯಿಂದ ವಿಶ್ವದ ಅತಿ ಎತ್ತರದ ಶ್ರೀ ರಾಮನ ಪ್ರತಿಮೆ ಅನಾವರಣ | Ram statue In Goa

Ram statue In Goa | ಇದು ವಿಶ್ವದಲ್ಲೇ ಅತಿ ಎತ್ತರದ ಶ್ರೀ ರಾಮನ ಪ್ರತಿಮೆ
Ram statue In Goa | ಇದು ವಿಶ್ವದಲ್ಲೇ ಅತಿ ಎತ್ತರದ ಶ್ರೀ ರಾಮನ ಪ್ರತಿಮೆ
Published on
ಪಣಜಿ: ದಕ್ಷಿಣ ಗೋವಾ ಜಿಲ್ಲೆಯ ಶ್ರೀ ಸಂಸ್ಥಾನ ಗೋಕರ್ಣ ಜೀವೋತ್ತಮ ಮಠದಲ್ಲಿನ 77 ಅಡಿ ಎತ್ತರದ ರಾಮನ ಕಂಚಿನ ಪ್ರತಿಮೆಯನ್ನು ಪ್ರಧಾನಿ ನರೇಂದ್ರ ಮೋದಿ ಅವರು ಅನಾವರಣಗೊಳಿಸಲಿದ್ದಾರೆ ಎಂದು ಮಠದ ಪ್ರತಿನಿಧಿಯೊಬ್ಬರು ತಿಳಿಸಿರುವುದಾಗಿ ಪಿಟಿಐ ವರದಿಮಾಡಿದೆ.
ಪ್ರಧಾನಿ ಮೋದಿ ಮಧ್ಯಾಹ್ನ 3.45 ಕ್ಕೆ ಸ್ಥಳಕ್ಕೆ ಆಗಮಿಸಲಿದ್ದು. ಮಠದ ಆವರಣದಲ್ಲಿ ವಿಶೇಷ ಹೆಲಿಪ್ಯಾಡ್ ಸಹ ನಿರ್ಮಿಸಲಾಗಿದೆ ಎಂದು ಕೇಂದ್ರ ಸಮಿತಿ ಅಧ್ಯಕ್ಷ ಶ್ರೀನಿವಾಸ್ ಡೆಂಪೊ ತಿಳಿಸಿದ್ದಾರೆ. 77 ಅಡಿ ಎತ್ತರದ ಶ್ರೀ ರಾಮನ ಪ್ರತಿಮೆಯನ್ನು ಪ್ರಧಾನಿಯವರ ಅಮೃತ ಹಸ್ತದಿಂದ ಅನಾವರಣಗೊಳಿಸಲಾಗುವುದು ಎಂದು ಅವರು ತಿಳಿಸಿದ್ದಾರೆ.
ಗುಜರಾತ್‌ನಲ್ಲಿ ಏಕತಾ ಪ್ರತಿಮೆಯನ್ನು ವಿನ್ಯಾಸಗೊಳಿಸಿದ್ದ ಶಿಲ್ಪಿ ರಾಮ್ ಸುತಾರ್ ಅವರೇ ಇಲ್ಲಿನ ಶ್ರೀ ರಾಮನ ಪ್ರತಿಮೆಯನ್ನು ನಿರ್ಮಿಸಿದ್ದಾರೆ ಎಂದು ಗೋವಾ ಲೋಕೋಪಯೋಗಿ ಸಚಿವ ದಿಗಂಬರ ಕಾಮತ್ ಹೇಳಿದ್ದು. ಇದು ವಿಶ್ವದಲ್ಲೇ ಅತಿ ಎತ್ತರದ ಶ್ರೀ ರಾಮನ ಪ್ರತಿಮೆಯಾಗಲಿದೆ ಎಂದರು. ಸಾರ್ವಜನಿಕ ಸಭೆಗೂ ಮುನ್ನ ಪ್ರಧಾನಿ ಮೋದಿ ಮಠದಲ್ಲಿರುವ ದೇವಾಲಯಕ್ಕೆ ಭೇಟಿ ನೀಡಲಿದ್ದಾರೆ ಎಂದು ಡೆಂಪೊ ತಿಳಿಸಿದ್ದು, ಗೋವಾ ರಾಜ್ಯಪಾಲ ಅಶೋಕ್ ಗಜಪತಿ ರಾಜು, ಮುಖ್ಯಮಂತ್ರಿ ಪ್ರಮೋದ್ ಸಾವಂತ್ ಮತ್ತು ಕೇಂದ್ರ ಸಚಿವ ಶ್ರೀಪಾದ ನಾಯಕ್, ರಾಜ್ಯ ಸಂಪುಟ ಸಚಿವರು ಸಮಾರಂಭದಲ್ಲಿ ಉಪಸ್ಥಿತರಿರುತ್ತಾರೆ ಎಂದು ಹೇಳಿದರು.
ಮಠದ ಸಂಪ್ರದಾಯದ 550 ವರ್ಷಗಳನ್ನು ಆಚರಿಸುವ ನಿಟ್ಟಿನಲ್ಲಿ ನವೆಂಬರ್ 27 ರಿಂದ ಡಿಸೆಂಬರ್ 7 ರವರೆಗೆ ವಿವಿಧ ಕಾರ್ಯಕ್ರಮಗಳನ್ನು ನಡೆಸಲಾಗುತ್ತಿದೆ. ಗೋವಾದಲ್ಲಿರುವ ಮಠದ ಆವರಣವನ್ನು 370 ವರ್ಷಗಳ ಹಿಂದೆ ಕೆನಕೋನಾ (ದಕ್ಷಿಣ ಗೋವಾ ಜಿಲ್ಲೆ) ದ ಪಾರ್ಟಗಲ್ ಗ್ರಾಮದಲ್ಲಿ ನಿರ್ಮಿಸಲಾಗಿದೆ ಎಂದು ಡೆಂಪೊ ಮಾಹಿತಿ ನೀಡಿದ್ದಾರೆ. ಈ ಸಂದರ್ಭದಲ್ಲಿ ಹಲವಾರು ಅರ್ಥಪೂರ್ಣ ಕಾರ್ಯಕ್ರಮಗಳನ್ನು ಆಯೋಜಿಸಲು ಚಿಂತನೆ ನಡೆಸಲಾಗಿದ್ದು, ಪ್ರತಿದಿನ 7,000 ರಿಂದ 10,000 ಜನರು ಮಠಕ್ಕೆ ಭೇಟಿ ನೀಡುವ ನಿರೀಕ್ಷೆಯಿದೆ ಎಂದರು.
ಯುಗಯುಗಗಳಿಂದ ಆಧ್ಯಾತ್ಮಿಕ ಕೇಂದ್ರವಾಗಿ ಸೇವೆ ಸಲ್ಲಿಸಿರುವ ಮಠದ ಆವರಣವನ್ನು ಈಗ ಸಂಪೂರ್ಣವಾಗಿ ನವೀಕರಿಸಲಾಗಿದೆ ಎಂದು ಸಚಿವ ಕಾಮತ್ ಮಾಹಿತಿ ನೀಡಿದ್ದಾರೆ(ಏಜೆನ್ಸೀಸ್​).
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net