ಯುವಕರ ಜೊತೆಗಿನ ಪ್ರಧಾನಿ ಮೋದಿಯವರ ಸಂಪರ್ಕ ರಾಹುಲ್ ಗಾಂಧಿಯವರಿಗೆ ಚಿಂತೆಗೀಡು ಮಾಡಿದೆ: ಪಿಯೂಷ್ ಗೋಯಲ್ | Piyush Goyal
ಕೇಂದ್ರ ವಾಣಿಜ್ಯ ಸಚಿವ ಪಿಯೂಷ್ ಗೋಯಲ್
Published on:
Copied
Follow Us
ಮುಂಬೈ: ಪ್ರಧಾನಿ ನರೇಂದ್ರ ಮೋದಿ ಮತ್ತು ದೇಶದ ಯುವಜನರ ನಡುವಿನ ಸಂಬಂಧ ಹೆಚ್ಚುತ್ತಿರುವುದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರಿಗೆ ಚಿಂತೆಗೀಡಾಗುವಂತೆ ಮಾಡಿದೆ ಎಂದು ಭಾನುವಾರ(ಆ. 02) ಕೇಂದ್ರ ಸಚಿವ ಪಿಯೂಷ್ ಗೋಯಲ್(Piyush Goyal) ಹೇಳಿದ್ದಾರೆ.
ಮುಂಬೈನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ಯುವ ಜನರಲ್ಲಿ ರಾಹುಲ್ ಗಾಂಧಿಗಿಂತ ಪ್ರಧಾನಿ ಮೋದಿ ಹೆಚ್ಚಿನ ಜನಪ್ರಿಯತೆಯನ್ನು ಹೊಂದಿದ್ದಾರೆ. ಬಿಜೆಪಿ ಸತತ ಮೂರು ಅವಧಿಗೆ ಅಧಿಕಾರ ಹಿಡಿಯಲು ಸಹಾಯ ಮಾಡಿದ್ದಕ್ಕಾಗಿ ಪ್ರಧಾನಿ ಮೋದಿ ಜೆನ್ಝಿ ಮತ್ತು ಯುವಕರಿಗೆ ಮನ್ನಣೆ ನೀಡಿದ್ದಾರೆ ಎಂದು ಪ್ರತಿಪಾದಿಸಿದ್ದಾರೆ.
ಪ್ರಧಾನಿ ಮೋದಿಯವರು ಇಂದು ವಿಶ್ವದ ಅತ್ಯಂತ ಜನಪ್ರಿಯ ನಾಯಕರಾಗಿದ್ದಾರೆ. ಎಕ್ಸ್, ಫೇಸ್‌ಬುಕ್, ಯೂಟ್ಯೂಬ್ ಮತ್ತು ಇನ್‌ಸ್ಟಾಗ್ರಾಮ್‌ನಂತಹ ಸಾಮಾಜಿಕ ಮಾಧ್ಯಮ ವೇದಿಕೆಗಳಲ್ಲಿ ಪ್ರಧಾನಿಯವರ ಅಪಾರ ಅನುಯಾಯಿಗಳು ಯುವ ಪೀಳಿಗೆಯಲ್ಲಿ ಅವರ ಪ್ರಭಾವವನ್ನು ಪ್ರತಿಬಿಂಬಿಸುತ್ತಾರೆ ಎಂದಿದ್ದಾರೆ.
ಯುವಕರು ಮೋದಿಯವರ ವಿಕ್ಷಿತ್ ಭಾರತ್ 2047ರ ದೃಷ್ಟಿಕೋನವನ್ನು ಬೆಂಬಲಿಸುವುದನ್ನು ಮುಂದುವರಿಸುತ್ತಾರೆ. ಮತ್ತು ಮಾದಕ ದ್ರವ್ಯ ಸೇವನೆಯ ವಿರುದ್ಧ ರಾಷ್ಟ್ರವ್ಯಾಪಿ ಅಭಿಯಾನದಲ್ಲಿ ಸಕ್ರಿಯವಾಗಿ ಭಾಗವಹಿಸುತ್ತಾರೆ ಎಂದು ತಿಳಿಸಿದ್ದಾರೆ.
ಇದೇ ವೇಳೆ ಶಿವಸೇನೆ (ಯುಬಿಟಿ) ಮುಖ್ಯಸ್ಥ ಉದ್ಧವ್ ಠಾಕ್ರೆ ವಿರುದ್ಧ ಕಿಡಿಕಾರಿದ ಗೋಯಲ್, ಯುವಕರಿಗಾಗಿ ಕೆಲಸ ಮಾಡುವ ಅಗತ್ಯವನ್ನು ಠಾಕ್ರೆ ಈಗಷ್ಟೇ ಅರಿತುಕೊಂಡಿರುವುದು ದುರದೃಷ್ಟಕರ. ಮಹಾರಾಷ್ಟ್ರ ಸಿಎಂ ಆಗಿದ್ದ ಅವಧಿಯಲ್ಲಿ ಯುವಕರಿಗಾಗಿ ಕೆಲಸ ಮಾಡಲು ಅವಕಾಶವಿತ್ತು. ಆದರೆ ಅದನ್ನು ಪೂರೈಸಲು ವಿಫಲರಾದರು ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ (ಏಜೆನ್ಸೀಸ್).