ಸಿಜೆಐ ಪ್ರಮಾಣವಚನ ಸಮಾರಂಭಕ್ಕೆ ರಾಹುಲ್​ ಗೈರು: ವಿಪಕ್ಷ ನಾಯಕನ ವಿರುದ್ಧ ಬಿಜೆಪಿ ವಾಗ್ದಾಳಿ | Rahul Gandhi

ಬಿಜೆಪಿ ರಾಷ್ಟ್ರೀಯ ವಕ್ತಾರ ಶಹಜಾದ್ ಪೂನಾವಾಲಾ ಮತ್ತು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ(Rahul Gandhi)
ಬಿಜೆಪಿ ರಾಷ್ಟ್ರೀಯ ವಕ್ತಾರ ಶಹಜಾದ್ ಪೂನಾವಾಲಾ ಮತ್ತು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ(Rahul Gandhi)
Published on
ನವದೆಹಲಿ: ಭಾರತದ ಮುಖ್ಯ ನ್ಯಾಯಮೂರ್ತಿ (ಸಿಜೆಐ) ಸೂರ್ಯಕಾಂತ್ ಅವರ ಪ್ರಮಾಣ ವಚನ ಸ್ವೀಕಾರ ಸಮಾರಂಭಕ್ಕೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ(Rahul Gandhi) ಹಾಜರಾಗದಿರುವುದಕ್ಕೆ ಭಾರತೀಯ ಜನತಾ ಪಕ್ಷ (ಬಿಜೆಪಿ) ಪ್ರತಿಕ್ರಿಯಿಸಿದ್ದು, ಕಾಂಗ್ರೆಸ್‌ಗೆ ಬಿ.ಆರ್. ಅಂಬೇಡ್ಕರ್ ಮತ್ತು ಸಂವಿಧಾನದ ಬಗ್ಗೆ ಗೌರವವಿಲ್ಲ ಎಂದು ಬಿಜೆಪಿ ಆರೋಪಿಸಿದೆ.
ಈ ಬಗ್ಗೆ ಎಕ್ಸ್​ನಲ್ಲಿ ಪೋಸ್ಟ್​ ಮಾಡಿರುವ ಬಿಜೆಪಿ ರಾಷ್ಟ್ರೀಯ ವಕ್ತಾರ ಶಹಜಾದ್ ಪೂನಾವಾಲಾ, ಇಂದು, ಇಡೀ ದೇಶ, ವಿಶೇಷವಾಗಿ ಹರಿಯಾಣ, ಭಾರತದ ಮುಖ್ಯ ನ್ಯಾಯಮೂರ್ತಿಗಳ ಪ್ರಮಾಣವಚನ ಸಮಾರಂಭವನ್ನು ಆಚರಿಸುತ್ತಿದೆ. ಅದರೆ, ರಾಹುಲ್​ ಗಾಂಧಿ ಇದರಲ್ಲಿ ಭಾಗವಹಿಸಲಿಲ್ಲ ಎಂದು ಕಿಡಿಕಾರಿದ್ದಾರೆ.
ಈ ಮಹತ್ವದ ಕಾರ್ಯಕ್ರಮದಲ್ಲಿ ಭಾಗವಹಿಸುವ ಬದಲು, ರಾಹುಲ್ ಗಾಂಧಿ ವಿದೇಶ ಪ್ರವಾಸ ಮಾಡುತ್ತಿದ್ದರು ಎಂದು ಕಾಣುತ್ತಿದೆ. ಇದು ಅವರ ಕುಟುಂಬ, ವಿಶೇಷವಾಗಿ ಅವರು ಸ್ವತಃ ಸಂವಿಧಾನದ ಬಗ್ಗೆ ಮಾತನಾಡುತ್ತಾರೆ. ಆದರೆ ಅಂಬೇಡ್ಕರ್ ಮತ್ತು ಸಂವಿಧಾನವನ್ನು ಗೌರವಿಸುವುದಿಲ್ಲ ಎಂದು ತೋರಿಸುತ್ತದೆ. ಕಾಂಗ್ರೆಸ್ ಕುಟುಂಬ ವ್ಯವಸ್ಥೆಯನ್ನು ಪ್ರಜಾಪ್ರಭುತ್ವ ಮತ್ತು ಸಂವಿಧಾನಕ್ಕಿಂತ ಮೇಲಿರಿಸುತ್ತದೆ ಎಂದು ಬಿಜೆಪಿ ವಕ್ತಾರರು ತೀವ್ರ ವಾಗ್ದಾಳಿ ನಡೆಸಿದ್ದಾರೆ.
ನ್ಯಾಯಮೂರ್ತಿ ಸೂರ್ಯ ಕಾಂತ್ ಸೋಮವಾರ ಭಾರತದ 53 ನೇ ಮುಖ್ಯ ನ್ಯಾಯಮೂರ್ತಿಯಾಗಿ ಪ್ರಮಾಣ ವಚನ ಸ್ವೀಕರಿಸಿದರು.
ರಾಷ್ಟ್ರಪತಿ ಭವನದಲ್ಲಿ ನಡೆದ ಸಮಾರಂಭದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ನ್ಯಾಯಮೂರ್ತಿ ಸೂರ್ಯಕಾಂತ್ ಅವರಿಗೆ ಪ್ರಮಾಣ ವಚನ ಬೋಧಿಸಿದರು. ಈ ಸಮಾರಂಭದಲ್ಲಿ ಉಪರಾಷ್ಟ್ರಪತಿ ಸಿ.ಪಿ. ರಾಧಾಕೃಷ್ಣನ್ ಮತ್ತು ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಹಿರಿಯ ನಾಯಕರು ಹಾಜರಿದ್ದರು.(ಏಜೆನ್ಸೀಸ್).
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net