ಇನ್ನು, ಮೇಲ್ದಿ ಸುಬನ್ಸಿರಿ ಜಿಲ್ಲೆಯ ಕಿಯೋಜರಿಂಗ್-ಬ್ಯಾಚಿಂಗ್ ರಸ್ತೆ ನಿರ್ಮಾಣ ಸ್ಥಳದಲ್ಲಿ ಭಾರೀ ಭೂಕುಸಿತ ಸಂಭವಿಸಿದೆ. ಮಣ್ಣಿನಡಿ ಹಲವರು ಸಿಲುಕಿದ್ದು, ತಾಡು ಬಾಕಿ, ತಾಜಿ ರೈ, ಮಾರ್ಕೋಶ್ ಬಸೂಮತಾರಿ ಮತ್ತು ಬಾಬುಲ್ ಅಲಿ ಎಂಬುವವರು ಮೃತಪಟ್ಟಿದ್ದಾರೆ. ಬಾಬುಲ್ ಅಲಿ ಮೃತದೇಹ ಸಿಕ್ಕಿದ್ದು, ಉಳಿದವರಿಗಾಗಿ ಪೊಲೀಸರು, ಅಗ್ನಿಶಾಮಕ ಸಿಬ್ಬಂದಿ ಹಾಗೂ ಎಸ್ಡಿಆರ್ಎಫ್ ತಂಡಗಳು ಶೋಧ ಕಾರ್ಯ ಮುಂದುವರಿಸಿವೆ.