ಈ ಕುರಿತು ಮಾತನಾಡಿರುವ ಬಿಜೆಪಿಯ ಹಿರಿಯ ಸಂಸದ ರವಿಶಂಕರ್ ಪ್ರಸಾದ್, ರಾಹುಲ್ ಗಾಂಧಿಯವರು ಉಲ್ಲೇಖಿಸುತ್ತಿರುವ ಘಟನೆಗೆ ಸಂಬಂಧಿಸಿದಂತೆ ಈಗಾಗಲೇ ಎಫ್ಐಆರ್ ದಾಖಲಿಸಲಾಗಿದ್ದು, ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಆದರೆ ಕಾಂಗ್ರೆಸ್ ನಾಯಕರು ಅನುಮತಿ ಅಥವಾ ಪೂರ್ವ ಸೂಚನೆ ಇಲ್ಲದೆ ಪ್ರತಿಭಟನೆ ನಡೆಸುತ್ತಿದ್ದಾರೆ ಎಂದು ಕಿಡಿಕಾರಿದ್ದಾರೆ.