ಅಹ್ಮದಾಬಾದ್: ಗುಜರಾತ್‌ನ ಸುರೇಂದ್ರನಗರ ಜಿಲ್ಲೆಯಲ್ಲಿ ಇಂದು(ಮೇ 14) ಮುಂಜಾನೆ ಸುಮಾರು 40 ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ ಖಾಸಗಿ ಐಷರಾಮಿ ಸ್ಪೀಪರ್ ಕೋಚ್ ಬಸ್(Sleeper coach bus) ಟ್ಯಾಂಕರ್ಗೆ ಡಿಕ್ಕಿ ಹೊಡೆದ ಬಳಿಕ ಬೆಂಕಿ ಹೊತ್ತಿಕೊಂಡಿದ್ದು, ಘಟನೆಯಲ್ಲಿ ನಾಲ್ವರು ಸಜೀವದಹನವಾಗಿದ್ದು, 10 ಮಂದಿಗೆ ಗಂಭೀರ ಗಾಯಗಳಾಗಿವೆ.