ಲೇಹ್ ಅಪೆಕ್ಸ್ ಬಾಡಿ ಮತ್ತು ಕಾರ್ಗಿಲ್ ಡೆಮಾಕ್ರಟಿಕ್ ಅಲೈಯನ್ಸ್ನ ಸದಸ್ಯರು ಒಟ್ಟಾಗಿ ಸೇರಿ, ಸೆಪ್ಟೆಂಬರ್ 19 ರಿಂದ 24 ರವರೆಗೆ ಬೃಹತ್ ಪಾದಯಾತ್ರೆ ನಡೆಸುವುದಾಗಿ ಗುರುವಾರ ಅಧಿಕೃತವಾಗಿ ಘೋಷಿಸಿದ್ದಾರೆ. ಒಂದು ವಾರದೊಳಗೆ ಸರ್ಕಾರದಿಂದ ಸೂಕ್ತ ಭರವಸೆ ಸಿಗದಿದ್ದರೆ, ಲಡಾಖ್ ಹೋರಾಟಕ್ಕೆ ಬೆಂಬಲ ನೀಡುವಂತೆ ದೇಶದ ಮೂಲೆಮೂಲೆಯ ಜನರನ್ನು ಕೋರಲಾಗುವುದು ಎಂದು ವಾಂಗ್ಚುಕ್ ಎಚ್ಚರಿಸಿದ್ದಾರೆ.