ನವದೆಹಲಿ: ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿ ಅವರ ಬಹುನಿರೀಕ್ಷಿತ ಆತ್ಮಕಥೆ 'ಬಿಲಾಂಜಿಂಗ್: ಎ ಜರ್ನಿ ಆಫ್ ಲವ್ ಇನ್ ಇಂಡಿಯಾ' ಪುಸ್ತಕ ಪ್ರಕಟಣೆಯಿಂದ ಹಿಂದೆ ಸರಿಯುವ ವಿವಾದದ ನಡುವೆ ಕಾಂಗ್ರೆಸ್(Congress) ನಾಯಕರು, ಪ್ರಕಾಶಕ ಸಂಸ್ಥೆ ಪೆಂಗ್ವಿನ್ ರಾಂಡಮ್ ಹೌಸ್ ಇಂಡಿಯಾ ವಿರುದ್ಧ ಮುಗಿಬಿದ್ದಿದ್ದು, ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ಕೊಲೆ ಮಾಡಿದೆ ಎಂದು ಟೀಕಿಸಿದ್ದಾರೆ.