ಪ್ರಜ್ವಲ್ ರೇವಣ್ಣ ಮಹಿಳೆಯರ ವಿರುದ್ಧ ದೌರ್ಜನ್ಯ ಎಸಗಿದ್ದಾರೆ ಎಂದು ಬಿಂಬಿಸುವ 2,900ಕ್ಕೂ ಹೆಚ್ಚು ವಿಡಿಯೋಗಳು ಹರಿದಾಡಿದ ಹಿನ್ನೆಲೆಯಲ್ಲಿ ಅವರ ವಿರುದ್ಧ ಐಪಿಸಿ ಸೆಕ್ಷನ್ 376(2)(ಎನ್), 354 ಎ, 354 ಬಿ, 354 ಸಿ, 506, 201 ಹಾಗೂ ಮಾಹಿತಿ ತಂತ್ರಜ್ಞಾನ ಕಾಯಿದೆ 66 ಇ ಅಡಿ ನಾಲ್ಕು ಪ್ರಕರಣ ದಾಖಲಾಗಿತ್ತು. ಮನೆಗೆಲಸದಾಕೆಯ ಮೇಲೆ ನಿರಂತರ ಅತ್ಯಾಚಾರ ಎಸಗಿದ ಪ್ರಕರಣದಲ್ಲಿ ಪ್ರಜ್ವಲ್ ತಪ್ಪಿತಸ್ಥ ಎಂದು ಕಳೆದ ಆಗಸ್ಟ್‌ನಲ್ಲಿ ಅಡಿಷನಲ್ ಸಿಟಿ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಧೀಶ ಸಂತೋಷ್ ಗಜಾನನ್ ಭಟ್ ಅವರು ಆಜೀವ ಶಿಕ್ಷೆ ವಿಧಿಸಿದ್ದರು. ಈ ತೀರ್ಪಿನ ವಿರುದ್ಧ ಸಲ್ಲಿಸಲಾದ ಮೇಲ್ಮನವಿ ಹೈಕೋರ್ಟ್‌ನಲ್ಲಿ ಬಾಕಿ ಇದೆ. ಅಂತೆಯೇ ವಿಚಾರಣೆ ವರ್ಗಾಯಿಸಲು ನ್ಯಾಯಸಮ್ಮತ ಕಾರಣ ಕಂಡುಬರುತ್ತಿಲ್ಲ ಎಂದ ಪೀಠ ಅರ್ಜಿಯನ್ನು ತಿರಸ್ಕರಿಸಿತು.(ಏಜೆನ್ಸೀಸ್).