ಒಂದು ರಾಷ್ಟ್ರ, ಒಂದು ಚುನಾವಣೆ ಕುರಿತ ಲೋಕಸಭಾ ಸಮಿತಿಯ ಅವಧಿ ಚಳಿಗಾಲದ ಅಧಿವೇಶನಕ್ಕೆ ವಿಸ್ತರಣೆ | One Nation, One Election

ಪಿ.ಪಿ. ಚೌಧರಿ
ಪಿ.ಪಿ. ಚೌಧರಿ
Published on
ನವದೆಹಲಿ: ಒಂದು ರಾಷ್ಟ್ರ ಒಂದು ಚುನಾವಣೆ(One Nation, One Election) ಪ್ರಸ್ತಾವನೆಯನ್ನು ಪರಿಶೀಲಿಸುತ್ತಿರುವ ಸಂಸತ್ತಿನ ಜಂಟಿ ಸಮಿತಿಗೆ ತನ್ನ ವರದಿಯನ್ನು ಸಲ್ಲಿಸಲು ಮುಂದಿನ ಚಳಿಗಾಲದ ಅಧಿವೇಶನದ ಅಂತ್ಯದವರೆಗೆ ಅವಧಿಯನ್ನು ವಿಸ್ತರಿಸಲಾಗಿದೆ.
ವರದಿ ಸಲ್ಲಿಕೆಗೆ ನೀಡಿರುವ ಗಡುವನ್ನು ಚಳಿಗಾಲದ ಅಧಿವೇಶನದ ಕೊನೆಯ ವಾರದ ಮೊದಲ ದಿನದವರೆಗೆ ವಿಸ್ತರಿಸುವಂತೆ ಕೋರಿ ಸಮಿತಿಯ ಅಧ್ಯಕ್ಷ ಪಿ.ಪಿ. ಚೌಧರಿ ಬುಧವಾರ ನಿರ್ಣಯ ಮಂಡಿಸಿದರು.
ಲೋಕಸಭೆಯಲ್ಲಿ ಧ್ವನಿ ಮತದ ಮೂಲಕ ನಿರ್ಣಯವನ್ನು ಅಂಗೀಕರಿಸಲಾಯಿತು. 41 ಸದಸ್ಯರ ಸಮಿತಿಯು ಲೋಕಸಭೆ ಮತ್ತು ರಾಜ್ಯ ವಿಧಾನಸಭೆಗಳಿಗೆ ಏಕಕಾಲದಲ್ಲಿ ಚುನಾವಣೆಗಳನ್ನು ಪರಿಚಯಿಸುವ ಸಂವಿಧಾನ (129ನೇ ತಿದ್ದುಪಡಿ) ಮಸೂದೆ-2024 ಅನ್ನು ಪರಿಶೀಲಿಸುತ್ತಿದೆ.
2029ರ ವೇಳೆಗೆ ಲೋಕಸಭೆ, ರಾಜ್ಯ ವಿಧಾನಸಭೆಗಳು ಮತ್ತು ಸ್ಥಳೀಯ ಸಂಸ್ಥೆಗಳಿಗೆ ಏಕಕಾಲದಲ್ಲಿ ಚುನಾವಣೆ ನಡೆಸುವ ಪ್ರಸ್ತಾವಿತ ಅನುಷ್ಠಾನದ ಕುರಿತು ಸಮಿತಿಯು ರಾಷ್ಟ್ರವ್ಯಾಪಿ ಸಮಾಲೋಚನೆಗಳನ್ನು ನಡೆಸುತ್ತಿದೆ. ಸಂಸತ್ತಿನ ಚಳಿಗಾಲದ ಅಧಿವೇಶನ ಸಾಮಾನ್ಯವಾಗಿ ನವೆಂಬರ್​ನಲ್ಲಿ ಆರಂಭವಾಗುತ್ತದೆ (ಏಜೆನ್ಸೀಸ್).
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net