ನಿಮ್ಮ ಸೇವೆಗಾಗಿ ಧನ್ಯವಾದ: ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ; ಸರ್ಕಾರದ ಮೊದಲ ರಿಯಾಕ್ಷನ್! Dharmendra Pradhan Resignation
ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ
Published on:
Copied
Follow Us
ಪ್ರಮುಖ ಮುಖ್ಯಾಂಶಗಳು
ನೀಟ್ ಯುಜಿ ಪರೀಕ್ಷಾ ಅಕ್ರಮದ ಪ್ರತಿಭಟನೆಗೆ ಮಣಿದ ಕೇಂದ್ರ ಸರ್ಕಾರ
ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ
ರಾಜೀನಾಮೆ ಸ್ವೀಕರಿಸಿದ ಕೇಂದ್ರ ಸರ್ಕಾರ
ನವದೆಹಲಿ: ನೀಟ್ ಪರೀಕ್ಷೆಯಲ್ಲಿ ನಡೆದ ಅಕ್ರಮವನ್ನು ವಿರೋಧಿಸಿ ಕಾಕ್ರೋಚ್ ಜನತಾ ಪಾರ್ಟಿ ಕಳೆದೊಂದು ತಿಂಗಳಿನಿಂದ ದೆಹಲಿಯ ಜಂತರ್ ಮಂತರ್ನಲ್ಲಿ ಪ್ರತಿಭಟನೆ ನಡೆಸುತ್ತಿತ್ತು. ಈ ಪ್ರತಿಭಟನೆಯ ಪ್ರಮುಖ ಗುರಿ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಯನ್ನು ಪಡೆಯುವುದಾಗಿತ್ತು. ಇಂದು (ಶನಿವಾರ, ಜು.25) ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ತಮ್ಮ ಸಚಿಚ ಸ್ಥಾನಕ್ಕೆ ರಾಜೀನಾಮೆ ಘೋಷಿಸಿದ್ದು (Dharmendra Pradhan Resignation) ಈ ರಾಜೀನಾಮೆಯನ್ನು ಸರ್ಕಾರ ಸ್ವೀಕರಿಸಿದೆ.
ಕೇಂದ್ರ ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡುತ್ತಿದ್ದಂತೆ ಇದಕ್ಕೆ ಪ್ರತಿಕ್ರಿಯೆ ನೀಡಿದ ಸಂಸದೀಯ ವ್ಯವಹಾರಗಳ ಸಚಿವ ಕಿರಣ್ ರಿಜುಜು, ನಾಯಕನ ನಿಜವಾದ ನಾಯಕತ್ವವನ್ನು ದಶಕಗಳ ಬಳಿಕ ಅಳೆಯಲಾಗುತ್ತದೆ ಮತ್ತು ಧರ್ಮೇಂದ್ರ ಪ್ರಧಾನ್ ಅವರ ಪ್ರಯಾಣವು ಸಾರ್ವಜನಿಕ ಜೀವನ ಮತ್ತು ವಿದ್ಯಾರ್ಥಿ ಕಲ್ಯಾಣದೊಂದಿಗೆ ಅವರ ಆಜೀವ ತೊಡಗಿಸಿಕೊಂಡಿದ್ದಕ್ಕೆ ಸಾಕ್ಷಿಯಾಗಿದೆ ಎಂದು ರಿಜಿಜು ಬರೆದಿದ್ದಾರೆ.
ಶಿಕ್ಷಣ ಕ್ಷೇತ್ರವನ್ನು ಮುನ್ನಡೆಸಲು ಅಪಾರ ಪರಿಶ್ರಮ ಬೇಕಾಗುತ್ತದೆ ಮತ್ತು ಪ್ರಧಾನ್, ಧೈರ್ಯ ಮತ್ತು ಸ್ಪಷ್ಟ ದೃಷ್ಟಿಕೋನ ದೊಂದಿಗೆ ಈ ಜವಾಬ್ದಾರಿಯನ್ನು ವಹಿಸಿಕೊಂಡಿದ್ದರು. ಅವರು ಪ್ರತಿಯೊಂದು ನೀತಿ ನಿರ್ಧಾರಗಳನ್ನು ರೂಪಿಸುವಾಗ ಲಕ್ಷಾಂತರ ವಿದ್ಯಾರ್ಥಿಗಳ ಹಿತಾಸಕ್ತಿಗಳನ್ನು ತಮ್ಮ ಗಮನದಲ್ಲಿಟ್ಟುಕೊಳ್ಳುತ್ತಿದ್ದರು ಎಂದಿದ್ದಾರೆ.
'ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಕೊಟ್ಟಿದ್ದಾರೆ. ನಾವು ಸಾಧಿಸಿದ್ದೇವೆ, ಪ್ರಜಾಪ್ರಭುತ್ವ ಗೆದ್ದಿದೆ, ಜಿರಳೆಗಳು ಗೆದ್ದಿವೆ. ಈಗ ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿಗಳ ಕುಟುಂಬಕ್ಕೆ 1 ಕೋಟಿ ಪರಿಹಾರ ನೀಡಬೇಕು ಮತ್ತು ಪೊಲೀಸರ ದೌರ್ಜನ್ಯದ ವಿರುದ್ಧ ಕ್ರಮ ಜರುಗಬೇಕು ಎಂದಿದ್ದಾರೆ.
ವಿದ್ಯಾರ್ಥಿಗಳ ಪೊಲೀಸರು ಲಾಠಿ ಬೀಸಿದ್ದೀರಿ ಅಲ್ವಾ? ನಮ್ಮ ಜೊತೆ ನಿಮ್ಮ ಆಟ ಬೇಡ. ವಿದ್ಯಾರ್ಥಿಗಳ ಮೇಲೆ ದಾಖಲಾಗಿರುವ ಪ್ರಕರಣಗಳನ್ನು ಹಿಂಪಡೆಯಬೇಕು ಎಂದು ಕಾಕ್ರೋಚ್ ಪಾರ್ಟಿ ಸ್ಥಾಪಕ ಅಭಿಜಿತ್ ದೀಪ್ಕೆ ಹೇಳಿದ್ದಾರೆ, (ಏಜನ್ಸೀಸ್).