ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ ಉಂಟಾಗಿ ಈ ಮಾರ್ಗದಲ್ಲಿ ತೈಲ ಸಂಚಾರಕ್ಕೆ ತಡೆಯುಂಟಾದರೆ, ಜಾಗತಿಕ ಮಾರುಕಟ್ಟೆಯಲ್ಲಿ ತೈಲ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗುತ್ತದೆ. ಸಾಗಾಣಿಕೆ ವೆಚ್ಚ ಮತ್ತು ವಿಮಾ ದರಗಳು ಗಗನಕ್ಕೇರಿ, ಅಂತಾರಾಷ್ಟ್ರೀಯ ಮಟ್ಟದಲ್ಲಿ ಕಚ್ಚಾ ತೈಲದ ಬೆಲೆಗಳು ಭಾರಿ ಪ್ರಮಾಣದಲ್ಲಿ ಏರಿಕೆಯಾಗುತ್ತವೆ. ಇದು ನೇರವಾಗಿ ಪೆಟ್ರೋಲ್, ಡೀಸೆಲ್ ಮತ್ತು ಅನಿಲ ಬೆಲೆ ಹೆಚ್ಚಳಕ್ಕೆ ಕಾರಣವಾಗುತ್ತದೆ, (ಏಜನ್ಸೀಸ್).