ಬಳಿಕ ಸಿಎಂ ಸಿದ್ದರಾಮಯ್ಯನವರಿಗೆ ರಾಜೀನಾಮೆ ನೀಡಿ ರಾಜ್ಯಸಭೆಗೆ ಬರುವಂತೆ ರಾಹುಲ್ ಗಾಂಧಿ ಆಹ್ವಾನಿಸಿದ್ದಾರೆ ಎನ್ನಲಾಗಿದೆ. 'ಪಕ್ಷ ಈಗಾಗಲೇ ನಿಮಗೆ ಅವಕಾಶ ನೀಡಿದ್ದು, ವಿಪಕ್ಷ ನಾಯಕರಾಗಿದ್ದೀರಿ, ಎರಡು ಬಾರಿ ಮುಖ್ಯಮಂತ್ರಿಯಾಗಿದ್ದೀರಿ. ಈಗ ಬೇರೆಯವರಿಗೆ ಅವಕಾಶ ನೀಡುವ ಸಮಯ ಬಂದಿದೆ' ಎಂದು ರಾಹುಲ್ ಹೇಳಿದ್ದಾರೆನ್ನಲಾಗಿದೆ. ಆದರೆ ಸಿಎಂ ಸಿದ್ದರಾಮಯ್ಯ ಗುರುವಾರ ಬೆಳಗ್ಗೆ ಎಲ್ಲ ಸಚಿವರೊಂದಿಗೆ ಉಪಾಹಾರ ಕೂಟ ನಡೆಸಿ ಸ್ಪಷ್ಟಪಡಿಸುವುದಾಗಿ ಹೇಳಿದ್ದಾರೆ ಎನ್ನಲಾಗಿದೆ.