ಟಿಎಂಸಿ 200ಕ್ಕೂ ಹೆಚ್ಚು ಸ್ಥಾನಗಳಲ್ಲಿ ಗೆಲ್ಲಲಿದೆ; ಚುನಾವಣೋತ್ತರ ಸಮೀಕ್ಷೆ ತಿರಸ್ಕರಿಸಿದ ಸಿಎಂ ಮಮತಾ ಬ್ಯಾನರ್ಜಿ | CM Mamata Banerjee

ಸಿಎಂ ಮಮತಾ ಬ್ಯಾನರ್ಜಿ
ಸಿಎಂ ಮಮತಾ ಬ್ಯಾನರ್ಜಿ
Published on
ಕೋಲ್ಕತ್ತಾ: ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಯಲ್ಲಿ ತಮ್ಮ ಪಕ್ಷ ತೃಣಮೂಲ ಕಾಂಗ್ರೆಸ್​ 200ಕ್ಕೂ ಹೆಚ್ಚು ಸ್ಥಾನಗಳಲ್ಲಿ ಗೆಲ್ಲಲಿದೆ ಎಂದು ಶನಿವಾರ(ಮೇ 02) ವಿಶ್ವಾಸ ವ್ಯಕ್ತಪಡಿಸಿರುವ ಸಿಎಂ ಮಮತಾ ಬ್ಯಾನರ್ಜಿ(CM Mamata Banerjee), ಚುನಾವಣೋತ್ತರ ಸಮೀಕ್ಷೆಗಳನ್ನು ತಿರಸ್ಕರಿಸಿದ್ದಾರೆ.
ವಿಡಿಯೋ ಕಾನ್ಫ್​ರೆನ್ಸ್​ ಮೂಲಕ ಟಿಎಂಸಿ ಮತಎಣಿಕೆ ಏಜೆಂಟ್​​ಗಳ ಜೊತೆ ಮಾತನಾಡಿರುವ ಅವರು, ಎಕ್ಸಿಟ್ ಪೋಲ್​ಗಳನ್ನು ನಂಬಬೇಡಿ, ಅವು ಷೇರು ಮಾರುಕಟ್ಟೆಯನ್ನು ನಿರ್ವಹಿಸಲು ಮಾಡಿದ ಕುಶಲತೆಯ ಪ್ರಯತ್ನದ ಭಾಗವೆಂದು ಹೇಳಿದ್ದಾರೆ.
ಈ ಚುನಾವಣೆಯಲ್ಲಿ ನಾವು 200ಕ್ಕೂ ಹೆಚ್ಚು ಸ್ಥಾನಗಳಲ್ಲಿ ಗೆಲ್ಲುತ್ತೇವೆ. ಎಕ್ಸಿಟ್ ಪೋಲ್‌ಗಳು ಷೇರು ಮಾರುಕಟ್ಟೆಯನ್ನು ಕುಶಲತೆಯಿಂದ ನಿರ್ವಹಿಸುವ ಪ್ರಯತ್ನವಲ್ಲದೆ ಬೇರೇನೂ ಅಲ್ಲ. ಅವು 2021, 2024ರ ಚುನಾವಣೆಯಲ್ಲೂ ಹೀಗೆ ಹೇಳಿದ್ದವು. ಆದರೆ ವಾಸ್ತವ ಏನಾಯಿತು ನಾವು ಗೆದ್ದೆವು ಎಂದು ಹೇಳಿದ್ದಾರೆ.
ಕೇಂದ್ರ ಸಶಸ್ತ್ರ ಪೊಲೀಸ್ ಪಡೆಗಳು ಟಿಎಂಸಿ ಕಾರ್ಯಕರ್ತರ ವಿರುದ್ಧ ದೌರ್ಜನ್ಯ ನಡೆಸಿದ್ದು, ಮುಂದಿನ ದಿನಗಳಲ್ಲಿ ಪಕ್ಷವು ಅವರಿಂದ ಬಾಧಿತರಾದವರಿಗೆ ಪ್ರತಿಫಲ ನೀಡುತ್ತದೆ ಎಂದು ಭರವಸೆ ನೀಡಿದ್ದಾರೆ.
ಪಶ್ಚಿಮ ಬಂಗಳಾ ವಿಧಾನಸಭೆ ಚುನಾವಣೆ ಏಪ್ರಿಲ್ 23 ಮತ್ತು ಏಪ್ರಿಲ್ 29 ರಂದು ಎರಡು ಹಂತಗಳಲ್ಲಿ ನಡೆದಿದ್ದು, ಇಂದು ದಕ್ಷಿಣ 24 ಪರಗಣ ಜಿಲ್ಲೆಯ ಎರಡು ಕ್ಷೇತ್ರಗಳಾದ ಡೈಮಂಡ್ ಹಾರ್ಬರ್ ಕ್ಷೇತ್ರದ 4 ಮತಗಟ್ಟೆ ಮತ್ತು ಮಗ್ರಹತ್ ಪಶ್ಚಿಮ್ ಅಸೆಂಬ್ಲಿಯ 11 ಮತಗಟ್ಟೆಗಳಲ್ಲಿ ಮರು ಮತದಾನ ನಡೆದಿದೆ. ಮೇ 04ರಂದು ಪಂಚರಾಜ್ಯಗಳ ಫಲಿತಾಂಶ ಪ್ರಕಟವಾಗಲಿದೆ (ಏಜೆನ್ಸೀಸ್).
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net