ಸಾಯೋನಿ ಘೋಷ್ ಅವರ ಈ ನಡೆ ತೃಣಮೂಲ ಕಾಂಗ್ರೆಸ್‌ಗೆ ಭಾರಿ ಆಘಾತ ನೀಡಿದೆ. ಇತ್ತೀಚೆಗಷ್ಟೇ ಪಕ್ಷದ ಯುವ ಘಟಕದ ಅಧ್ಯಕ್ಷೆಯಾಗಿ ನೇಮಕಗೊಂಡಿದ್ದ ಸಾಯೋನಿ, ಮಮತಾ ಬ್ಯಾನರ್ಜಿ ಅವರನ್ನು ದೇಶದ ಮುಂದಿನ ಪ್ರಧಾನಿ ಅಭ್ಯರ್ಥಿ ಎಂದು ಬಿಂಬಿಸಿದ್ದರು. ಚುನಾವಣಾ ಪ್ರಚಾರದ ವೇಳೆ ಮಾಧ್ಯಮಗಳೊಂದಿಗೆ ಮಾತನಾಡುತ್ತಾ, ದೀದಿ ಗೆದ್ದರೆ ಬಂಗಾಳ ಗೆದ್ದಂತೆ ಎಂದು ಹೇಳಿದ್ದಲ್ಲದೆ, ತಾವೆಂದಿಗೂ ಮಮತಾ ಬ್ಯಾನರ್ಜಿ ಅವರ ಕೈಬಿಡುವುದಿಲ್ಲ ಎಂದು ಪ್ರತಿಜ್ಞೆ ಮಾಡಿದ್ದರು.