ಭಾರತೀಯ ಚುನಾವಣೆ ವ್ಯವಸ್ಥೆ ಬಗ್ಗೆ ಟ್ರಂಪ್ ಹೊಗಳಿಕೆ; ಇದು ನಮ್ಮ ವ್ಯವಸ್ಥೆಯ ವಿಶ್ವಾಸಾರ್ಹತೆ ಮತ್ತು ದೃಢತೆಗೆ ಸಾಕ್ಷಿ: ಕೇಂದ್ರ | Central Government

ಪ್ರಧಾನಿ ಮೋದಿ ಮತ್ತು ಡೊನಾಲ್ಡ್ ಟ್ರಂಪ್
ಪ್ರಧಾನಿ ಮೋದಿ ಮತ್ತು ಡೊನಾಲ್ಡ್ ಟ್ರಂಪ್
Published on
ನವದೆಹಲಿ: ಭಾರತದ ಚುನಾವಣೆ ವ್ಯವಸ್ಥೆಯ ಬಗ್ಗೆ ಅಮೆರಿಕ ಅಧ್ಯಕ್ಷ ಡೊನಾಲ್ಡ್​ ಟ್ರಂಪ್​ ಹೊಗಳಿರುವ ಬಗ್ಗೆ ಪ್ರತಿಕ್ರಿಯಿಸಿರುವ ಕೇಂದ್ರ ಸರ್ಕಾರ(Central Government), ಮಂಗಳವಾರ(ಆ. 18) ಇದು ನಮ್ಮ ನಾವಣಾ ವ್ಯವಸ್ಥೆಯ ವಿಶ್ವಾಸಾರ್ಹತೆ ಮತ್ತು ದೃಢತೆಗೆ ಸಾಕ್ಷಿ ಎಂದು ಹೇಳಿದೆ. 
ಈ ಕುರಿತು ಮಾತನಾಡಿರುವ ವಿದೇಶಾಂಗ ಸಚಿವರ ವಕ್ತಾರ ರಣಧೀರ್ ಜೈಸ್ವಾಲ್, ಈ ಹೇಳಿಕೆಗಳ ಬಗ್ಗೆ ನನಗೆ ಯಾವುದೇ ನಿರ್ದಿಷ್ಟ ಕಾಮೆಂಟ್‌ಗಳಿಲ್ಲ. ಆದಾಗ್ಯೂ, ಭಾರತದ ಚುನಾವಣಾ ಯಂತ್ರೋಪಕರಣಗಳ ವಿಶ್ವಾಸಾರ್ಹತೆ ಮತ್ತು ದೃಢತೆ ಜಾಗತಿಕವಾಗಿ ಸತ್ಯವಾಗಿದೆ ಎಂದು ನಾನು ಹೇಳಬಲ್ಲೆ ಎಂದಿದ್ದಾರೆ.

ಡೊನಾಲ್ಡ್ ಟ್ರಂಪ್ ಹೇಳಿದ್ದೇನು?

ಭಾರತದ ಚುನಾವಣಾ ವ್ಯವಸ್ಥೆಯನ್ನು ಕೊಂಡಾಡಿರುವ ಡೊನಾಲ್ಡ್ ಟ್ರಂಪ್, ಅಮೆರಿಕಾ ಚುನಾವಣೆಯಲ್ಲಿ ಪೌರತ್ವದ ಪುರಾವೆ ಮತ್ತು ಮತದಾರರ ಗುರುತಿನ ಚೀಟಿಯನ್ನು ಕಡ್ಡಾಯಗೊಳಿಸುವ ಮತ್ತು ಸೇಫ್‌ಗಾರ್ಡ್ ಅಮೆರಿಕನ್ ವೋಟರ್ ಎಲಿಜಿಬಿಲಿಟಿ (SAVE) ಅಮೆರಿಕ ಕಾಯ್ದೆಯನ್ನು ಜಾರಿಗೆ ತರುವ ಬಗ್ಗೆ ಪ್ರತಿಪಾದಿಸಿದ್ದಾರೆ.
ಈ ಕುರಿತು ತಮ್ಮ ಟ್ರೂತ್ ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡಿರುವ ಅವರು, ಅಮೆರಿಕದಲ್ಲಿ ಮತದಾರರ ಗುರುತಿನ ಚೀಟಿ ಅಗತ್ಯತೆಗಳ ಕುರಿತು ಮತ್ತು ಮಾನ್ಯವಾದ ಫೋಟೋ ಐಡಿ ಇಲ್ಲದೆ ಅಮೆರಿಕದಲ್ಲಿ ಚುನಾವಣೆಗಳನ್ನು ಹೇಗೆ ನಡೆಸಲು ಸಾಧ್ಯ ಎಂದು ಈ ತಿಂಗಳ ಆರಂಭದಲ್ಲಿ ಭಾರತದ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರು ಪ್ರಶ್ನಿಸಿದ್ದನ್ನು ಟ್ರಂಪ್ ಸ್ಮರಿಸಿಕೊಂಡಿದ್ದಾರೆ.
ಭಾರತದಲ್ಲಿ ಇತ್ತೀಚೆಗೆ ನಡೆದ ಸಾರ್ವತ್ರಿಕ ಚುನಾವಣೆಗಳಲ್ಲಿ 646 ಮಿಲಿಯನ್‌ಗಿಂತಲೂ ಹೆಚ್ಚು ಜನರು ಭಾಗವಹಿಸಿದ್ದರು, ಆದರೆ ಶೇಕಡಾ ಒಂದಕ್ಕಿಂತ ಕಡಿಮೆ ಜನರು ಅಂಚೆ ಮತಪತ್ರಗಳ ಮೂಲಕ ಮತ ಚಲಾಯಿಸಿದ್ದನ್ನು ಶ್ಲಾಘಿಸಿದ್ದಾರೆ. 

ಹಾಗೆಯೇ ಭಾರತದ ಚುನಾವಣಾ ವ್ಯವಸ್ಥೆಯನ್ನು ಅಮೆರಿಕದ ವ್ಯವಸ್ಥೆಯೊಂದಿಗೆ ಹೋಲಿಸಿದ್ದು, ನಮ್ಮಲ್ಲಿಯೂ ಮತದಾನದ ಪ್ರಕ್ರಿಯೆಯನ್ನು ಮತ್ತಷ್ಟು ಸುರಕ್ಷಿತ ಹಾಗೂ ಪಾರದರ್ಶಕಗೊಳಿಸಲು ಗುರುತಿನ ಚೀಟಿ ಮತ್ತು ಪೌರತ್ವದ ದಾಖಲೆಗಳನ್ನು ಕಡ್ಡಾಯಗೊಳಿಸುವ ಅಗತ್ಯವಿದೆ ಎಂದು ಹೇಳಿದ್ದಾರೆ (ಏಜೆನ್ಸೀಸ್). 
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net