140 ವಿಧಾನಸಭಾ ಕ್ಷೇತ್ರಗಳನ್ನು ಹೊಂದಿರುವ ಕೇರಳ (Kerala Election Results) ರಾಜ್ಯದಲ್ಲಿ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್-ಯುಡಿಎಫ್ ಮೈತ್ರಿಯು 100 ಕ್ಕೂ ಅಧಿಕ ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದ್ದು, ರಾಜ್ಯದಲ್ಲಿ ಸರ್ಕಾರ ರಚಿಸುವುದು ಬಹುತೇಕ ಖಚಿತವಾಗಿದೆ. ಇನ್ನು ಮುಖ್ಯಮಂತ್ರಿ ಪಿಣರಾಯಿ ವಿಜಯನ್ ನೇತೃತ್ವದ ಎಲ್ಡಿಎಫ್ ಕೇವಲ 35 ಕ್ಷೇತ್ರಗಳಲ್ಲಿ ಮುನ್ನಡೆ ಹೊಂದಿದ್ದು, 10 ವರ್ಷದ ಆಡಳಿತಕ್ಕೆ ಮತದಾರ ಬ್ರೇಕ್ ಹಾಕಿದ್ದಾರೆ.