ಈ ಬಗ್ಗೆ ಎಕ್ಸ್ನಲ್ಲಿ ಪೋಸ್ಟ್ ಮಾಡಿರುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್, ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಕಳೆದ ಕೆಲವು ವಾರಗಳಿಂದ ಈ ಬಜೆಟ್ ಬಗ್ಗೆ ಸೃಷ್ಟಿಸಲಾಗಿದ್ದ ನಿರೀಕ್ಷೆಗಳು ಮತ್ತು ಹೈಪ್ ಬೆಟ್ಟದಷ್ಟಿತ್ತು. ಆದರೆ, ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರ 90 ನಿಮಿಷಗಳ ಭಾಷಣದ ನಂತರ ಹೊರಬಂದ ಫಲಿತಾಂಶ ಮಾತ್ರ ಶೂನ್ಯ ಎಂದು ತೀವ್ರ ವಾಗ್ದಾಳಿ ನಡೆಸಿದ್ದಾರೆ.