ಎಐ ಶೃಂಗಸಭೆಯಲ್ಲಿ ಅರಬೆತ್ತಲೆ ಪ್ರತಿಭಟನೆ.. ಯೂತ್​ ಕಾಂಗ್ರೆಸ್​ ರಾಷ್ಟ್ರೀಯ ಅಧ್ಯಕ್ಷ ಉದಯ್ ಭಾನು ಬಂಧನ! | Uday Bhanu Arrest

Uday Bhanu Arrest | ಯೂತ್​ ಕಾಂಗ್ರೆಸ್​ ರಾಷ್ಟ್ರೀಯ ಅಧ್ಯಕ್ಷ ಉದಯ್ ಭಾನು ಚಿಬ್​
Uday Bhanu Arrest | ಯೂತ್​ ಕಾಂಗ್ರೆಸ್​ ರಾಷ್ಟ್ರೀಯ ಅಧ್ಯಕ್ಷ ಉದಯ್ ಭಾನು ಚಿಬ್​
Published on
ನವದೆಹಲಿ: ಇತ್ತೀಚೆಗೆ ಭಾರತ್ ಮಂಟಪದಲ್ಲಿ ನಡೆದ ಎಐ ಶೃಂಗಸಭೆಯ ಸಂದರ್ಭದಲ್ಲಿ ಅರಬೆತ್ತಲೆ ಪ್ರತಿಭಟನೆ ನಡೆಸಿದ ಆರೋಪದ ಮೇಲೆ ಯೂತ್​ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಉದಯ್ ಭಾನು ಚಿಬ್​ರನ್ನು (Uday Bhanu Arrest) ದೆಹಲಿ ಪೊಲೀಸರು ಬಂಧಿಸಿದ್ದಾರೆ.
ಉದಯ್​ರನ್ನು ಇಂದು (ಮಂಗಳವಾರ-ಫೆ.24) ಬೆಳಿಗ್ಗೆ ಪೊಲೀಸ್​ ವಶಕ್ಕೆ ಪಡೆಯಲಾಗಿದ್ದು, 10 ಗಂಟಗೆ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.

ಅಕ್ರಮ ಬಂಧನ ಎಂದ ಕಾಂಗ್ರೆಸ್​ ನಾಯಕ

ಈ ಬಂಧನದ ಕುರಿತಾಗಿ ತಮ್ಮ ಎಕ್ಸ್​ ಖಾತೆಯಲ್ಲಿ ಪೋಸ್ಟ್ ಹಂಚಿಕೊಳ್ಳುವ ಮೂಲಕ ಪ್ರತಿಕ್ರಿಯೆ ನೀಡಿರುವ ಕಾಂಗ್ರೆಸ್​ನ ಹಿರಿಯ ನಾಯಕ ಭೂಪೇಶ್ ಬಘೇಲ್, ಉದಯ್ ಭಾನು ಚಿಬ್ ಮತ್ತು ಇತರ ಯುವ ಸದಸ್ಯರ ಬಂಧನವನ್ನು ಅಕ್ರಮ ಎಂದು ಕರೆದರು.
ಈ ಬೆಳವಣಿಗೆಯನ್ನು ನಾನು ಬಲವಾಗಿ ಖಂಡಿಸುತ್ತೇನೆ, ಪ್ರಜಾಪ್ರಭುತ್ವದಲ್ಲಿ ಪ್ರಶ್ನೆಗಳನ್ನು ಎತ್ತುವುದು ಮತ್ತು ಕಳವಳಗಳನ್ನು ಶಾಂತಿಯುತವಾಗಿ ವ್ಯಕ್ತಪಡಿಸುವುದು ಅಪರಾಧವಲ್ಲ, ಮೂಲಭೂತ ಹಕ್ಕು ಎಂದು ಹೇಳಿದರು.
ಯುವ ಕಾಂಗ್ರೆಸ್ ಕಾರ್ಯಕರ್ತರು ಹಿಂಸಾಚಾರವಿಲ್ಲದೆ ಪ್ರತಿಭಟನೆ ನಡೆಸಿದರು ಮತ್ತು ಯುವಜನರು ಎದುರಿಸುತ್ತಿರುವ ಸಮಸ್ಯೆಗಳನ್ನು ಎತ್ತಿ ತೋರಿಸಲು ಮಾತ್ರ ಪ್ರಯತ್ನಿಸುತ್ತಿದ್ದರು ಎಂದು ಬಾಘೇಲ್ ತಿಳಿಸಿದ್ದು, ಚಿಬ್ ಮತ್ತು ಬಂಧಿತ ಇತರ ಸದಸ್ಯರನ್ನು ತಕ್ಷಣ ಬಿಡುಗಡೆ ಮಾಡಬೇಕು ಮತ್ತು ಪ್ರಕರಣಗಳನ್ನು ರದ್ದುಗೊಳಿಸಬೇಕೆಂದು ಒತ್ತಾಯಿಸಿದರು.
ಉದಯ್ ಭಾನುರನ್ನು ಸುದೀರ್ಘ ವಿಚಾರಣೆಗೆ ಒಳಪಡುಸುವ ಸಾಧ್ಯತೆಗಳಿದ್ದು, ಆದ್ದರಿಂದ ಅವರನ್ನು ಕಸ್ಟಡಿಗೆ ತೆಗೆದುಕೊಳ್ಳಬೇಕಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿರುವುದಾಗಿ ಇಂಡಿಯಾ ಟುಡೇ ವರದಿ ಮಾಡಿದೆ. ಈಗಾಗಲೇ ಬ0ಧಿತರಾಗಿರುವ ಏಳು ಆರೋಪಿಗಳು ಯುವ ಕಾಂಗ್ರೆಸ್‌ಗೆ ಸೇರಿದವರೆನ್ನಲಾಗಿದೆ.

ಘಟನೆಯ ಹಿನ್ನೆಲೆ

ಫೆಬ್ರವರಿ 20, 2026ರಂದು (ಶುಕ್ರವಾರ) ದೆಹಲಿಯ ಭಾರತ್ ಮಂಟಪದಲ್ಲಿ ಅಂತರಾಷ್ಟ್ರೀಯ ಮಟ್ಟದ ಕೃತಕ ಬುದ್ಧಿಮತ್ತೆ (AI) ಶೃಂಗಸಭೆ' ನಡೆಯುತ್ತಿತ್ತು. ಈ ವೇಳೆ ಯುವ ಕಾಂಗ್ರೆಸ್ ಕಾರ್ಯಕರ್ತರು ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ ಕೂಗುತ್ತಾ, ತಮ್ಮ ಶರ್ಟ್‌ಗಳನ್ನು ಬಿಚ್ಚಿ ಅರೆಬೆತ್ತಲೆಯಾಗಿ ಪ್ರತಿಭಟನೆ ನಡೆಸಿದರು(ಏಜೆನ್ಸೀಸ್​​).
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net