<---Microsoft Clarity tracking tag-->

ಗ್ರಾಮೀಣ ವಿದ್ಯಾರ್ಥಿಗಳ ಪ್ರತಿಭೆಗೆ ಸಿಗಲಿ ಪ್ರೋತ್ಸಾಹ

ಅತ್ತಿಗೋಡು ಪ್ರೌಢಶಾಲೆಯಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಎಂ.ಡಿ.ಪೃಥ್ವಿರಾಜ್ ಅವರನ್ನು ಅಭಿನಂದಿಸಲಾಯಿತು. ಎಂ.ಸಿ.ಪ್ರಶಾಂತ್, ನಂಜುಂಡಸ್ವಾಮಿ, ನಾಗಶೆಟ್ಟಿ, ಸ್ವಾಮಿ,ರಮೆಶ್ ಇತರರಿದ್ದರು.
ಅತ್ತಿಗೋಡು ಪ್ರೌಢಶಾಲೆಯಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಎಂ.ಡಿ.ಪೃಥ್ವಿರಾಜ್ ಅವರನ್ನು ಅಭಿನಂದಿಸಲಾಯಿತು. ಎಂ.ಸಿ.ಪ್ರಶಾಂತ್, ನಂಜುಂಡಸ್ವಾಮಿ, ನಾಗಶೆಟ್ಟಿ, ಸ್ವಾಮಿ,ರಮೆಶ್ ಇತರರಿದ್ದರು.
Published on: 

ಪ್ರಮುಖ ಮುಖ್ಯಾಂಶಗಳು

  • ಅಕ್ಷರ ದಾಸೋಹ ನಿರ್ದೇಶಕ ಎಂ.ಸಿ.ಪ್ರಶಾಂತ್
  • ಅತ್ತಿಗೋಡು ಪ್ರೌಢಶಾಲೆ
ರಾವಂದೂರು: ಗ್ರಾಮೀಣ ವಿದ್ಯಾರ್ಥಿಗಳಲ್ಲೂ ಉತ್ತಮ ಪ್ರತಿಭೆಯಿದ್ದು, ಅದನ್ನ ಗುರುತಿಸಿ ಪ್ರೋತ್ಸಾಹಿಸಬೇಕಾದದ್ದು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಅಕ್ಷರ ದಾಸೋಹ ನಿರ್ದೇಶಕ ಎಂ.ಸಿ.ಪ್ರಶಾಂತ್ ತಿಳಿಸಿದರು.
ಅತ್ತಿಗೋಡು ಪ್ರೌಢಶಾಲೆಯಲ್ಲಿ ಸೋಮವಾರ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಎಂಟನೇ ತರಗತಿ ವಿದ್ಯಾರ್ಥಿಗಳಿಗೆ ಆಯೋಜಿಸಿದ್ದ ರಾಷ್ಟ್ರೀಯ ಪರೀಕ್ಷಾ ಹಂತದಲ್ಲಿ ಎನ್‌ಎಂಎಂಎಸ್ (ರಾಷ್ಟ್ರೀಯ ಮೀನ್ಸ್ ಕಮ್ ಮೆರಿಟ್ ವಿದ್ಯಾರ್ಥಿ ವೇತನ ಪರೀಕ್ಷೆ )ಪರೀಕ್ಷೆಯಲ್ಲಿ ತಾಲೂಕಿನ 600 ವಿದ್ಯಾರ್ಥಿಗಳು ಹಾಜರಾಗಿದ್ದು, ಒಬ್ಬ ಮಾತ್ರ ಉತ್ತೀರ್ಣನಾಗಿದ್ದಾನೆ. ಆರ್ಥಿಕವಾಗಿ ಹಿಂದುಳಿದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಸಹಾಯಧನ ನೀಡಲು ರಾಜ್ಯ ಮತ್ತು ಕೇಂದ್ರ ಸರ್ಕಾರ ಈ ಪರೀಕ್ಷೆ ನಡೆಸುತ್ತಿದೆ ಎಂದು ತಿಳಿಸಿದರು.
ಇದೇ ಸಂದರ್ಭದಲ್ಲಿ ಶಿಕ್ಷಣ ಇಲಾಖೆ ವತಿಯಿಂದ ವಿದ್ಯಾರ್ಥಿಯನ್ನು ಅಭಿನಂದಿಸಲಾಯಿತು. ರಾಷ್ಟ್ರೀಯ ಉತ್ತಮ ಶಾಲಾ ಪ್ರಶಸ್ತಿ ಪಡೆದ ಮುಖ್ಯ ಶಿಕ್ಷಕರು ಮತ್ತು ಶಿಕ್ಷಕರನ್ನು ಅಭಿನಂದಿಸಲಾಯಿತು.
ಶಿಕ್ಷಣ ಸಂಯೋಜಕ ನಂಜುಂಡಸ್ವಾಮಿ, ಪ್ರೌಢಶಾಲೆ ಮುಖ್ಯ ಶಿಕ್ಷಕ ನಾಗಶೆಟ್ಟಿ, ಶಿಕ್ಷಕ ಸ್ವಾಮಿ, ಪ್ರಾಥಮಿಕ ಶಾಲಾ ಮುಖ್ಯ ಶಿಕ್ಷಕ ರಮೆಶ್ ಇತರರಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net