ವಿದ್ಯಾರ್ಥಿಗಳ ಇತರ ಬೇಡಿಕೆಗಳನ್ನು ಬೆಂಬಲಿಸಿದ ರಾಹುಲ್ ಗಾಂಧಿ ರಾಜಧಾನಿಯಲ್ಲಿ ವಿದ್ಯಾರ್ಥಿಗಳ ಮೇಲೆ ಹಲ್ಲೆ ನಡೆಸಿದ ಪೊಲೀಸ್ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ. ಸೋಮವಾರ ನಡೆದ ದಾಳಿಗೆ ಸಂಬಂಧಿಸಿದಂತೆ ಪ್ರಧಾನಮಂತ್ರಿಯವರು ದೇಶದ ವಿದ್ಯಾರ್ಥಿಗಳ ಕ್ಷಮೆ ಕೇಳಬೇಕು ಎಂದು ಅವರು ತಮ್ಮ ಪಟ್ಟು ಮುಂದುವರಿಸಿದ್ದಾರೆ. ಪ್ರಧಾನಿ ನಿವಾಸದ ಹೊರಗೆ ನಡೆದ ಧರಣಿ ವೇಳೆ ಪೊಲೀಸರು ತಮ್ಮ ಮೇಲೆ ನಡೆಸಿದ ತಳ್ಳಾಟದ ಕುರಿತು ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿದ ಅವರು ತಮಗೆ ಬಿದ್ದ ಕೆಲವು ಪೆಟ್ಟುಗಳ ಬಗ್ಗೆ ತಲೆಕೆಡಿಸಿಕೊಳ್ಳುವುದಿಲ್ಲ ಎಂದಿದ್ದಾರೆ. ವಿದ್ಯಾರ್ಥಿಗಳ ಧ್ವನಿಯಾಗುವುದು ತಮಗೆ ಸಿಕ್ಕ ಗೌರವ ಎಂದು ಭಾವಿಸಿದ್ದು, ಸರ್ಕಾರ ತಮ್ಮನ್ನು ಹೇಗೆ ನಡೆಸಿಕೊಳ್ಳುತ್ತದೆ ಎಂಬುದು ಮುಖ್ಯವಲ್ಲ, ಆದರೆ ವಿದ್ಯಾರ್ಥಿಗಳ ಬೇಡಿಕೆಗಳು ಮತ್ತು ಅವರ ಭವಿಷ್ಯವೇ ತಮಗೆ ಮುಖ್ಯ ಎಂದು ರಾಹುಲ್ ಗಾಂಧಿ ಸ್ಪಷ್ಟಪಡಿಸಿದ್ದಾರೆ, (ಏಜೆನ್ಸೀಸ್).