ಹೌದು, ದೀಪಕ್ ಸಾವು ಪ್ರಕರಣ ಇದೀಗ ಹೈಕೋರ್ಟ್ ಮೆಟ್ಟಿಲೇರಿದೆ. ಅದಕ್ಕೂ ಮುನ್ನ ಈ ಪ್ರಕರಣ ಹಿನ್ನೆಲೆಯನ್ನು ಒಮ್ಮೆ ನೋಡಿ ಬರೋಣ. ಇತ್ತೀಚೆಗಷ್ಟೇ, ಸಾಮಾಜಿಕ ಜಾಲತಾಣದಲ್ಲಿ ಯುವತಿಯೊಬ್ಬಳು ತನಗೆ ಬಸ್ಸಿನಲ್ಲಿ ವ್ಯಕ್ತಿಯೊಬ್ಬ ಅಸಭ್ಯಕರವಾಗಿ ಮುಟ್ಟುತ್ತಿದ್ದಾನೆ ಎಂದು ವಿಡಿಯೋ ಮೂಲಕ ಬಿಂಬಿಸಿ, ಸುಳ್ಳು ಸಂದೇಶವನ್ನು ಸಾರಿದಳು. ಈ ವಿಡಿಯೋ ಜಾಲತಾಣಗಳಲ್ಲಿ ಕ್ಷಣಮಾತ್ರದಲ್ಲಿ ವೈರಲ್ ಆಗಿ, ವ್ಯಕ್ತಿಗೆ ಅಲ್ಲೇ ಹಿಗ್ಗಾಮುಗ್ಗಾ ಥಳಿಸಬೇಕಿತ್ತು ಎಂಬ ಕಮೆಂಟ್ಗಳಿಂದ ತುಂಬಿತು. ಸಾಕಷ್ಟು ಜನರು, ಆತನಿಗೆ ಸರಿಯಾಗಿ ಬುದ್ಧಿ ಕಲಿಸಬೇಕಿತ್ತು ಎಂದೆಲ್ಲ ಆಕ್ರೋಶ ಹೊರಹಾಕಿದರು. ತನ್ನದೇನು ತಪ್ಪಿಲ್ಲದಿದ್ದರೂ ಸುಖಾಸುಮ್ಮನೆ ನನ್ನನ್ನು ವಿಡಿಯೋದಲ್ಲಿ ತೋರಿಸಿ, ಮಾನ-ಮರ್ಯಾದೆ ಕಳೆದಳು ಎಂದು ದೀಪಕ್ (41) ತೀರ ಮನನೊಂದು ಆತ್ಮಹತ್ಯೆಗೆ ಶರಣಾದ ಘಟನೆ ಸದ್ಯ ಇಡೀ ದೇಶದಲ್ಲಿ ಭಾರೀ ಚರ್ಚೆಗೆ ಗ್ರಾಸವಾಗಿದೆ. ಅಲ್ಲದೆ, ಈ ಪ್ರಕರಣದಲ್ಲಿ ಪುರುಷರ ಸಂಘ ಇದೀಗ ಕೇರಳದ ಹೈಕೋರ್ಟ್ ಮೆಟ್ಟಿಲೇರಿದೆ.